ರಾಜ್ಯದ ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾರದ ಹಿಂದೆ (ಡಿ.30)ಕರೆ ಕೊಟ್ಟಿದ್ದರು. ನಕ್ಸಲರು ಮುಖ್ಯವಾಹಿನಿಗೆ ಬರಲು ಮಾತುಕತೆಗೆ ಮುಂದಾದರೆ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಲಾಗುವುದು. ಸಹಾನುಭೂತಿಯಿಂದ ನಡೆಸಿಕೊಳ್ಳಲಾಗುವುದು. ಸರ್ಕಾರ ಈಗಾಗಲೇ ರೂಪಿಸಿರುವ ನೀತಿಯನ್ನು ಇನ್ನಷ್ಟು ಸರಳಗೊಳಿಸಿ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದರು.