ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೃಂಗೇರಿ: ಶಾರದಾ ಮಠದಲ್ಲಿ ಪ್ರವಾಸಿಗರ ಸದ್ದು

Last Updated 6 ಸೆಪ್ಟೆಂಬರ್ 2020, 8:18 IST
ಅಕ್ಷರ ಗಾತ್ರ

ಶೃಂಗೇರಿ: ಕೋವಿಡ್ ಆತಂಕದ ನಡುವೆಯೂ ಶಾರದಾ ಪೀಠಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದ್ದು, ‌ಪ್ರವಾಸೋದ್ಯಮ ಚಟುವಟಿಕೆಗಳು ಚೇತರಿಕೆಯಾಗುತ್ತಿವೆ.

ಸರ್ಕಾರ ದೇವಸ್ಥಾನಗಳ ಪ್ರವೇಶಕ್ಕೆ ಅನುಮತಿ ನೀಡಿದ ನಂತರ ಶಾರದಾ ಮಠಕ್ಕೆ ಸೀಮಿತ ಪ್ರವೇಶ ಅವಕಾಶವನ್ನು ಕಲ್ಪಿಸಲಾಗಿದೆ.

25 ದಿನದಿಂದ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಪ್ರಸ್ತುತ ಶಾರದಾ ಮಠದಲ್ಲಿ ಊಟದ ವ್ಯವಸ್ಥೆ ಮತ್ತು ವಸತಿ ವ್ಯವಸ್ಥೆ ಇಲ್ಲ. ಪಟ್ಟಣದ ದೊಡ್ಡ ಹೋಟೆಲ್‍ಗಳು ಇನ್ನೂ ತೆರೆದಿಲ್ಲವಾದರೂ, ಭಕ್ತರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಮಕ್ಕಳ ಅಕ್ಷರಾಭ್ಯಾಸ ಸಹಿತ ವಿಶೇಷ ಪೂಜೆಗಳನ್ನು ಶಾರದಾ ಮಠದಲ್ಲಿ ಇನ್ನೂ ಆರಂಭಿಸಿಲ್ಲ. ನರಸಿಂಹವನದಲ್ಲಿರುವ ಗುರುನಿವಾಸದಲ್ಲಿ ಉಭಯ ಗುರುಗಳ ದರ್ಶನ ಪಡೆಯಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಶಾರದಾ ಮಠದ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರಭಾರತೀ ಸ್ವಾಮೀಜಿಯವರ ಚಾತುರ್ಮಾಸ್ಯ ಸಂದರ್ಭದಲ್ಲಿ ಪ್ರತಿದಿನ 4 ರಿಂದ 5 ಸಾವಿರ ಪ್ರವಾಸಿಗರು ಬಂದು ಆಶೀರ್ವಾದ ದರ್ಶನ ಪಡೆದರು.

ಶಾರದಾ ಮಠದಲ್ಲಿ ಬೆಳಿಗ್ಗೆ 7.30 ಗಂಟೆಯಿಂದ ಮಧ್ಯಾಹ್ನ 12 ಗಂಟೆ ಹಾಗೂ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳಿಗೆ ಅವಕಾಶ ನೀಡಿದೆ. ಭಕ್ತಾದಿಗಳು ಮಾಸ್ಕ್ ಧರಿಸಿ, ಅಂತರ ಕಾಪಡಿಕೊಂಡು, ತಮ್ಮ ಆಧಾರ್ ಕಾರ್ಡ್, ಮೊಬೈಲ್ ನಂಬರ್ ನೀಡಿ ಪ್ರವೇಶ ಪಡೆಯಬಹುದಾಗಿದೆ ಎಂದು ಶಾರದಾ ಪೀಠದ ಆಡಳಿತಾಧಿಕಾರಿ ಡಾ.ವಿ.ಆರ್ ಗೌರಿಶಂಕರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT