ಆಡಳಿತದ ಲೋಪ ದೋಷ ತಿದ್ದುವಲ್ಲಿ ಪತ್ರಿಕೆಗಳ ಪಾತ್ರ ಹಿರಿದು: ಸುರೇಶ್

ತರೀಕೆರೆ: ಆಡಳಿತ ವರ್ಗದ ಲೋಪದೋಷಗಳನ್ನು ಎತ್ತಿಹಿಡಿದು ಅವುಗಳನ್ನು ಸರಿಪಡಿಸುವಲ್ಲಿ ಪತ್ರಿಕೆಯ ಪಾತ್ರ ಮಹತ್ವದಾಗಿದೆ ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.
ಪಟ್ಟಣದ ಹೋಟೆಲ್‌ನಲ್ಲಿ ಸೋಮವಾರ ತಾಲ್ಲೂಕು ಪತ್ರಕರ್ತರ ಸಂಘ ಹಾಗೂ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಡೂರು ಮಾಜಿ ಶಾಸಕ ವೈ.ಎಸ್.ವಿ. ದತ್ತ ಮಾತನಾಡಿ, ‘ಖಾದ್ರಿ ಶಾಮಣ್ಣ ಕಾಲದಲ್ಲಿ ಪತ್ರಿಕೆಗಳ ಸಂಪಾದಕೀಯ ಸರ್ಕಾರದ ಅಳಿವು ಮತ್ತು ಉಳಿವು ಪ್ರತಿಬಿಂಬಿಸುತ್ತಿದ್ದವು. ಇಂದು ಪತ್ರಿಕೆಗಳು ಮಾಲೀಕರ ಅಭಿಪ್ರಾಯ ಬಿಂಬಿ
ಸುತ್ತಿರುವುದಕ್ಕೆ ಸೀಮಿತವಾಗುತ್ತಿದೆ ಎಂದು ವಿಷಾದಿಸಿದರು.
ಮಾಜಿ ಶಾಸಕ ಜಿ.ಎಚ್. ಶ್ರೀನಿವಾಸ್ ಮಾತನಾಡಿ, ಮಾಧ್ಯಮಗಳು ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದರು.
ಸಮಾಜ ಸೇವಕ ಎಚ್.ಎಂ ಗೋಪಿಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಧ್ರುವಕುಮಾರ್, ಕಾಂಗ್ರೆಸ್ ಮುಖಂಡ ದೋರನಾಳು ಪರಮೇಶ್, ಚಿಂತಕ ಮನಸುಳಿ ಮೋಹನ್, ಕರ್ನಾಟಕ ದಕ್ಷಿಣ ವಲಯ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಜಿ.ಎಂ.ರಾಜಶೇಖರ್, ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ಜಿಲಾ ಅಧ್ಯಕ್ಷ ಹಾತೂರು ಪ್ರಭಾಕರ್ ಮಾತನಾಡಿದರು.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಪೆನ್ನಯ್ಯ, ಪತ್ರಕರ್ತ ಜಿ.ಟಿ.ರಮೇಶ್, ಎಸ್.ಕೆ.ಸ್ವಾಮಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.