ನರಸಿಂಹರಾಜಪುರ: ಪೌರ ಸೇವಾ ನೌಕರರ ಬೇಡಿಕೆಗಳು ನ್ಯಾಯಯುತ ಆಗಿದ್ದು ಅವುಗಳನ್ನು ಶೀಘ್ರ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಗುರುವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.

2025ರ ಮೇ ತಿಂಗಳಲ್ಲಿ ರಾಜ್ಯದಾದ್ಯಂತ ಪೌರ ಸೇವಾ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 5 ದಿನ ಪ್ರತಿಭಟನೆ ನಡೆಸಿದ್ದ ವೇಳೆ ಬೇಡಿಕೆ ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಆದರೆ ಬೇಡಿಕೆಗಳನ್ನು ಈಡೇರಿಸದ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಎಲ್ಲಾ ಪೌರ ನೌಕರರು ಹಾಗೂ ಹೊರಗುತ್ತಿಗೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು, ಇತರೆ ನೌಕರರು ತಮ್ಮ ಕರ್ತವ್ಯಕ್ಕೆ ಗೈರುಹಾಜರಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿವೆ. ಇದರಿಂದ ಸಾರ್ವಜನಿಕ ಕೆಲಸ ಕಾರ್ಯಗಳಿಗೆ, ಕುಡಿಯುವ ನೀರು ಪೂರೈಕೆ, ನಗರ ನೈರ್ಮಲ್ಯ ಕೆಲಸಗಳಿಗೆ ಸಮಸ್ಯೆಯಾಗಲಿದೆ. ಹಾಗಾಗಿ ಇಲಾಖೆ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಪ್ರಭಾಕರ್, ಪದಾಧಿಕಾರಿಗಳು, ಕಾಂಗ್ರೆಸ್ ಮುಖಂಡ ಕಾಫಿ ಗಿರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.