ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಭೂಮಿ ಮಂಜೂರು: ಮೂವರು ತಹಶೀಲ್ದಾರ್‌ಗಳ ವಿರುದ್ಧ ಎಫ್‌ಐಆರ್

Published 5 ಫೆಬ್ರುವರಿ 2024, 18:41 IST
Last Updated 5 ಫೆಬ್ರುವರಿ 2024, 18:41 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತರೀಕೆರೆ ತಾಲ್ಲೂಕಿನ ಬಳ್ಳಾವರದಲ್ಲಿ ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪದಲ್ಲಿ ಇಬ್ಬರು ನಿವೃತ್ತ ತಹಶೀಲ್ದಾರ್ ಮತ್ತು ಒಬ್ಬರು ಹಾಲಿ ತಹಶೀಲ್ದಾರ್‌ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ.

ಬಳ್ಳಾವರ ಗ್ರಾಮದ ಸರ್ವೆ ನಂಬರ್ 22ರಲ್ಲಿ 353 ಎಕರೆ ಭೂಮಿಯನ್ನು 1930ರಲ್ಲೇ ಅರಣ್ಯ ಭೂಮಿ ಎಂದು ಅಧಿಸೂಚಿಸಲಾಗಿದೆ. ಇದೇ ಜಾಗದಲ್ಲಿ 1999, 2005, 2022ರಲ್ಲಿ ಖಾಸಗಿ ವ್ಯಕ್ತಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ. ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ತಹಶೀಲ್ದಾರ್‌ಗಳಾದ ಕೆ.ಎನ್.ನಾರಾಯಣಪ್ಪ, ಜಿ.ಎಸ್.ನಾಗರಾಜ್ ಮತ್ತು ಪೂರ್ಣಿಮಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ‘‍ಪ್ರಜಾವಾಣಿ’ಗೆ ತಿಳಿಸಿದರು.

ಈ ಮೂವರಲ್ಲಿ ಪೂರ್ಣಿಮಾ ಅವರು ಸದ್ಯ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದಾರೆ. ಉಳಿದ ಇಬ್ಬರು ನಿವೃತ್ತಿ ಹೊಂದಿದ್ದಾರೆ. ತರೀಕೆರೆ ಜೆಎಂಎಫ್‌ಸಿ ನ್ಯಾಯಾಲಯದ ಅನುಮತಿ ಪಡೆದು ಈ ಮೂವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT