ಶನಿವಾರ, ಜನವರಿ 28, 2023
24 °C

ಸೂರುಮನೆ ಜಲಪಾತದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಳಸ: ಅಬ್ಬುಗುಡಿಗೆ ಸಮೀಪದ ಸೂರುಮನೆ ಜಲಪಾತದಲ್ಲಿ ಶುಕ್ರವಾರ ಅರಣ್ಯ ಇಲಾಖೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವನ್ಯ ಜೀವಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ನಿಶ್ಚಿತ್ ಮತ್ತು ಕಳಸೇಶ್ವರ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ರುದ್ರಯ್ಯ ಆಚಾರ್ ಪ್ರವಾಸಿಗರಿಗೆ ಲೈಫ್ ಜಾಕೆಟ್ ಸೌಲಭ್ಯಕ್ಕೆ ಚಾಲನೆ ನೀಡಿದರು. ಜಲಪಾತದ ಸಮೀಪದ ಕೃಷಿಕ ಲಕ್ಷ್ಮಣಗೌಡ ಅವರನ್ನು ಸನ್ಮಾನಿಸಲಾಯಿತು. ಅರಣ್ಯ ರಕ್ಷಕರಾದ ರವಿ, ನಾಗರಾಜ್, ಅರಣ್ಯ ಸಮಿತಿ ಸದಸ್ಯರಾದ ಗಣೇಶ್ ಭಟ್, ಪ್ರಿಯಕಾರಣಿ, ಗ್ರಾಮಸ್ಥರಾದ ಶರತ್, ಅನೂಪ್, ಮೂರ್ತಿ ಮತ್ತಿತರರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು