ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರಣ್ಯ ಒತ್ತುವರಿ ತೆರವು | ನಾನು ರೈತರ ಪರ: ವಿ.ಸೋಮಣ್ಣ

ಶೃಂಗೇರಿ ಕ್ಷೇತ್ರದಲ್ಲಿ ಬಂದ್‌ ಇಂದು
Published 17 ಆಗಸ್ಟ್ 2024, 0:10 IST
Last Updated 17 ಆಗಸ್ಟ್ 2024, 0:10 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ವಿರೋಧಿಸಿ ಶನಿವಾರ (ಆ.17) ಶೃಂಗೇರಿ ಸೇರಿ ಕೆಲವೆಡೆ ಬಂದ್‌ಗೆ ಕರೆ ನೀಡಲಾಗಿದೆ. ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಸಚಿವ ವಿ.ಸೋಮಣ್ಣ, ‘ನಾನು ರೈತರ ಪರ ನಿಲ್ಲುತ್ತೇನೆ’ ಎಂದಿದ್ದಾರೆ.

ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಶೃಂಗೇರಿ, ಎನ್.ಆರ್.ಪುರ, ಕೊಪ್ಪ, ಬಾಳೆಹೊನ್ನೂರು, ಖಾಂಡ್ಯದಲ್ಲಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಬೇಕು ಎಂದು ವರ್ತಕರಲ್ಲಿ ಸಮಿತಿ ಮನವಿ ಮಾಡಿದೆ.

ಎಲ್ಲೆಡೆ ಮೆರವಣಿಗೆ ನಡೆಯಲಿದ್ದು, ಕೊಪ್ಪದಲ್ಲಿ ಸಮಾವೇಶ ನಡೆಯಲಿದೆ. ಮಲೆನಾಡು ಕರಾವಳಿ ಜನಪರ ಒಕ್ಕೂಟ, ಮಲೆನಾಡು ಅಡಿಕೆ ಬೆಳೆಗಾರರ ಸಂಘ, ಎಲ್ಲಾ ರಾಜಕೀಯ ಪಕ್ಷಗಳು ಬಂದ್‌ಗೆ ಬೆಂಬಲ ಸೂಚಿಸಿವೆ ಎಂದು ಸಮಿತಿ ಹೇಳಿದೆ.

ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ವಿ.ಸೋಮಣ್ಣ, ‘ಮಲೆನಾಡಿನ ಕೃಷಿಕರ ನೆಮ್ಮದಿ ಕಸಿದಿರುವ ಒತ್ತುವರಿ ತೆರವು ವಿಚಾರದ ಬಗ್ಗೆ ಆತಂಕ ಪಡುವುದು ಬೇಡ. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ನಾನು ರೈತರ ಪರವಾಗಿ ನಿಲ್ಲುತ್ತೇನೆ’ ಎಂದು ಹೇಳಿದರು.

‘ಅರಣ್ಯ ಮತ್ತು ಕಂದಾಯ ಭೂಮಿಯ ಗೊಂದಲ ಇಡೀ ರಾಜ್ಯದಲ್ಲಿದೆ. ಕೃಷಿಕರಿಗೆ ತೊಂದರೆ ಆಗದಂತೆ ಈ ವಿಷಯ ನಿರ್ವಹಣೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT