ಶನಿವಾರ, ಡಿಸೆಂಬರ್ 14, 2019
24 °C

ಸಿ.ಎಂ ಜವಾಬ್ದಾರಿಯುತವಾಗಿ ಮಾತಾಡಲಿ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ‘ಶಾಸಕ ತನ್ವೀರ್‌ ಸೇಠ್‌ ಮೇಲಿನ ಹಲ್ಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವವ ಎಸ್‌ಡಿಪಿಐ ಕಾರ್ಯಕರ್ತ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ಹಿಂದೆ ಯಾರ್ಯಾರು ಇದ್ದಾರೆ, ಷಡ್ಯಂತ್ರ ಏನಿದೆ ಎಂಬುದನ್ನು ಪತ್ತೆ ಹಚ್ಚುವಂತೆ ಅವರಿಗೆ ಹೇಳಿದ್ದೇನೆ’ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಲ್ಲಿ ಮಂಗಳವಾರ ಉತ್ತರಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‌ಐ ಸಂಘಟನೆ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆದಿದ್ದು ತನ್ವೀರ್‌ ಸೇಠ್‌ ಮೇಲಿನ ಹಲ್ಲೆಗೆ ಪರೋಕ್ಷ ಕಾರಣ ಎಂದು ಯಡಿಯೂರಪ್ಪ ಹೇಳಿದ್ದಾರೆಂದು ಸುದ್ದಿಗಾರರ ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ರಾಜಕಾರಣಕ್ಕೆ ಏನೋ ಹೇಳಿದ್ದಾರೆ. ಅವರು ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು. ತನ್ವೀರ್‌ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆ ಆಗಬೇಕು’ ಎಂದರು.

‘ಹಲ್ಲೆ, ಕೊಲೆ ಯತ್ನ, ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗುವ ಯಾವುದೇ ಸಂಘಟನೆಗಳಿಗೆ ನಮ್ಮ ಬೆಂಬಲ ಇಲ್ಲ. ಕಾನೂನು ಕೈಗೆತ್ತಿಕೊಳ್ಳುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಕ್ರಿಯಿಸಿದರು.

ಪ್ರತಿಕ್ರಿಯಿಸಿ (+)