ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೊಮ್ಮಾಯಿ ತರೀಕೆರೆಗೆ 15ರಂದು

ಜನ ಸಂಕಲ್ಪ ಯಾತ್ರೆ: ಶಾಸಕ ಡಿ.ಎಸ್.ಸುರೇಶ್
Last Updated 12 ನವೆಂಬರ್ 2022, 13:12 IST
ಅಕ್ಷರ ಗಾತ್ರ

ತರೀಕೆರೆ: ಪಟ್ಟಣಕ್ಕೆ ನವಂಬರ್ 15 ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುವರು ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನವಂಬರ್ 15 ರಂದು ಮಧ್ಯಾಹ್ನ 12.30ಕ್ಕೆ ತಾಲ್ಲೂಕು ಕಚೇರಿ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವಣಗೂಳಿಸುವರು. ನಂತರ ಕಡೂರು, ತರೀಕೆರೆ, ಅಜ್ಜಂಪುರ ತಾಲ್ಲೂಕುಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಭೂಮಿ ಪೂಜೆ ಸಲ್ಲಿಸುವರು. ದೋರನಾಳು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡುವರು. ಭದ್ರಾ ಉಪ ಕಣವೆಯಿಂದ ತಾಲ್ಲೂಕಿನ 56 ಕೆರೆಗಳಿಗೆ ನೀರು ಹರಿಸುವ ಕಾಮಗಾರಿ ವೀಕ್ಷಣೆ ಮಾಡಿ, ಎಸ್‌ಜೆಎಂ ಕಾಜೇಜು ಆವರಣದಲ್ಲಿ ಕಾರ್ಯಕರ್ತರು ಆಯೋಜಿಸಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.

ತಾಲ್ಲೂಕಿನ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಅವಧಿಯಲ್ಲಿ ಹೆಚ್ಚು ಅನುದಾನ ನೀಡಿದ್ದರಿಂದ ಸುಮಾರು ₹800 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಮಾತನಾಡಿ, ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ನಾರಾಯಣ ಸ್ವಾಮಿ, ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸುವರು ಎಂದರು.

ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಗರಗದಹಳ್ಳಿ ಪ್ರತಾಪ್,ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಟಿ.ಎಲ್ ರಮೇಶ್, ಮುಖಂಡರಾದ ರಮೇಶ್, ದಿನೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT