ಮೂಡಿಗೆರೆ (ಚಿಕ್ಕಮಗಳೂರು): ಪಟ್ಟಣದ ಲಯನ್ಸ್ ವೃತ್ತದಲ್ಲಿ ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕಾಗಿ ತಂದಿದ್ದ ಅಂಬೇಡ್ಕರ್ ಪುತ್ಥಳಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲ ನಿರ್ಮಾಣವಾಗಿದ್ದು ಉದ್ವಿಗ್ನ ಸ್ಥಿತಿ ಏರ್ಪಟ್ಟಿತ್ತು.

ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕಾಗಿ ಬೆಂಗಳೂರಿನಿಂದ ಅಂಬೇಡ್ಕರ್ ಪುತ್ಥಳಿಯನ್ನು ತರಲಾಗಿತ್ತು. ಅದನ್ನು ಕಾರ್ಯಕ್ರಮದ ಬಲಭಾಗದಲ್ಲಿ ಇಟ್ಟು ಪುಷ್ಪಾರ್ಚನೆ ಮಾಡಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿದರೂ ಅದನ್ನು ತೆರವು ಮಾಡದೇ ಉಳಿಸಿದ್ದರಿಂದ ಪಟ್ಟಣ ಪಂಚಾಯಿತಿಯಿಂದ ತೆರವಿಗೆ ಸೂಚಿಸಲಾಗಿತ್ತು.

ಈ ವೇಳೆ ಆಚರಣಾ ಸಮಿತಿಯ ಕೆಲವರು ತೆರವಿಗೆ ಒಪ್ಪಿಗೆ ಸೂಚಿಸಿದರೆ, ಮತ್ತೆ ಕೆಲವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಗೊಂದಲ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಇದ್ದ ಪೊಲೀಸರು ಗೊಂದಲವನ್ನು ತಿಳಿಗೊಳಿಸಿದ್ದು, ಆಚರಣಾ ಸಮಿತಿಯ ಪದಾಧಿಕಾರಿಗಳೇ ಪ್ರತಿಮೆಯನ್ನು ತೆರವು ಮಾಡಿದ್ದು, ಪ್ರಕರಣದ ಗೊಂದಲಕ್ಕೆ ತೆರೆ ಎಳೆಯಲಾಯಿತು.

ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಮೆ ಇಟ್ಟಿದ್ದ ಪ್ರದೇಶದಲ್ಲಿ ಪೊಲೀಸ್ ಕಾವಲು ಹಾಕಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.