ಗುರುವಾರ , ಫೆಬ್ರವರಿ 25, 2021
19 °C

ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೆ ಆಡಳಿತ ವ್ಯವಸ್ಥೆ ಕುಸಿತ: ಡಾ.ಕೆ.ಪಿ.ಅಂಶುಮಂತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನರಸಿಂಹರಾಜಪುರ: ‘ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೆ ಆಡಳಿತ ವ್ಯವಸ್ಥೆ ಕುಸಿದಿದೆ’ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆರೋಪಿಸಿದರು.

ಇಲ್ಲಿನ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಅತಿವೃಷ್ಟಿ ಸಮಸ್ಯೆ, ಅಕಾಲಿಕ ಮಳೆಯಿಂದ ರೈತರು ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿದ್ದು, ಇವರ ಸಮಸ್ಯೆಯನ್ನು ಆಲಿಸುವವರಿಲ್ಲ. ಹುಲಿ ಯೋಜನೆ, ಕಸ್ತೂರಿರಂಗನ್ ವರದಿಯಿಂದ ಜನರು ಆತಂಕದಲ್ಲಿದ್ದು, ಇದರ ಬಗ್ಗೆ ಮಾತನಾಡಬೇಕಾದ ಸಂಸದರು, ಬಿಜೆಪಿಯಲ್ಲಿ ಉನ್ನತ ಮಟ್ಟದ ಹುದ್ದೆ ಹೊಂದಿರುವ ಸಿ.ಟಿ.ರವಿ ಅವರು ಮೌನ ವಹಿಸಿದ್ದಾರೆ. ಬಿಜೆಪಿಯವರಿಗೆ ಜನರ ಸಮಸ್ಯೆಗಿಂತಲೂ ರಾಜಕಾರಣ ಮುಖ್ಯವಾಗಿದೆ’ ಎಂದು ದೂರಿದರು.

‘ಜನರಿಂದ ತಿರಸ್ಕೃತವಾಗಿದ್ದರೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿರುವ ಮಾಜಿ ಶಾಸಕರು ಕೀಳುಮಟ್ಟದ ಪದಗಳನ್ನು ಬಳಸುವ ಮೂಲಕ ಬೇಜವಾಬ್ದಾರಿಯುತವಾಗಿ ಶಾಸಕರನ್ನು, ಕಾಂಗ್ರೆಸ್ ಮುಖಂಡರನ್ನು ದೋಷಿಸುವುದನ್ನು ಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಶಾಸಕರಿಗೆ ಸಹಕರಿಸಲಿ’ ಎಂದರು.

ಇದೇ 20ರಂದು ರೈತರ ಪರವಾಗಿ ಕೆಪಿಸಿಸಿಯಿಂದ ಹಮ್ಮಿಕೊಳ್ಳಲಾಗಿರುವ ರಾಜಭವನ ಚಲೋ ಕಾರ್ಯಕ್ರಮಕ್ಕೆ ಜಿಲ್ಲೆಯಿಂದಲೂ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಮುಖಂಡರಾದ ಅಂಜುಮ್, ಕಿರಣ್,ಪ್ರಶಾಂತ್ ಶೆಟ್ಟಿ, ಉಪೇಂದ್ರ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು