ಎಂಇಎಸ್ ಪುಂಡಾಟಿಕೆ; ಕಾಂಗ್ರೆಸ್ ಷಡ್ಯಂತ್ರ: ಸಿ.ಟಿ. ರವಿ ಆರೋಪ

ಚಿಕ್ಕಮಗಳೂರು: ‘ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಸಂಘರ್ಷ ಸೃಷ್ಟಿಸಿ ರಾಜಕೀಯ ದುರ್ಲಾಭ ಪಡೆಯಲು ಷಡ್ಯಂತ್ರ ನಡೆಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಇವೆಲ್ಲದರ ನಿರ್ಮಾಪಕ, ನಿರ್ದೇಶಕ. ಅವರ ಬೆಂಬಲಿಗರೇ ಕೃತ್ಯಗಳಲ್ಲಿ ಪಾಲ್ಗೊಂಡಿದ್ದಾರೆ’ ಎಂದು ದೂರಿದರು.
‘ಕೊಲ್ಹಾಪುರದಲ್ಲಿ ಕನ್ನಡ ಬಾವುಟ ಸುಡುವಾಗ ಕಾಂಗ್ರೆಸ್ ಕಾರ್ಯಕರ್ತರು ಇದ್ದರು. ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದು ಡಿಕೆಶಿ, ಜಮೀರ್ ಅಹಮದ್ ಅವರ ಕಟ್ಟಾ ಬೆಂಬಲಿಗರು. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ ಮಾಡಿದ್ದವರ ಹಿಂದೆ ಎಂಇಎಸ್, ಕಾಂಗ್ರೆಸ್ ಇದೆ. ಈಗ ಬಸವೇಶ್ವರ ಪ್ರತಿಮೆಗೆ ಅಪಮಾನ ಮಾಡಲಾಗಿದೆ. ಜಾತಿ, ಭಾಷಾ ಸಂಘರ್ಷ ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಸಂಚು ಇದು’ ಎಂದು ಆರೋಪಿಸಿದರು.
‘ಈ ಷಡ್ಯಂತ್ರ ಬಯಲಿಗೆ ಎಳೆಯಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮುಖ್ಯಮಂತ್ರಿ, ಗೃಹ ಸಚಿವರಿಗೆ ಒತ್ತಾಯಿಸುತ್ತೇನೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.