ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ವಿಭಜನೆಗೆ ಕಾಂಗ್ರೆಸ್ ಕಾರಣ: ಸಿ.ಟಿ.ರವಿ

Published 4 ಜನವರಿ 2024, 15:50 IST
Last Updated 4 ಜನವರಿ 2024, 15:50 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಹಿಂದೂಗಳನ್ನು ದುರ್ಬಲಗೊಳಿಸುವ, ಒಡೆದಾಳುವುದು ಕಾಂಗ್ರೆಸ್ ನೀತಿ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ವಾಗ್ದಾಳಿ ನಡೆಸಿದರು. 

‘ಭಾರತ ಹಿಂದೂ ರಾಷ್ಟ್ರದ ಘೋಷಣೆಯಾದರೆ ಪಾಕಿಸ್ತಾನ, ಅಫ್ಘಾನಿಸ್ತಾನವಾಗಲಿದೆ’ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಅವರು ನಗರದಲ್ಲಿ ತಿರುಗೇಟು ನೀಡಿದರು.

‘ಇತಿಹಾಸ ಅರಿಯದವನು ಎಂದಿಗೂ ಇತಿಹಾಸ ಸೃಷ್ಟಿಸಲಾರ. ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಖಂಡ ಭಾರತದ ಭಾಗವಾಗಿತ್ತು. ಅಲ್ಲಿ ನೂರಾರು ಹಿಂದೂಗಳು ಇದ್ದರು. ಮತಾಂತರ ಮಾಡಿದ ಕಾರಣ ಹಿಂದೂಗಳ ಸಂಖ್ಯೆ ಕಡಿಮೆಯಾಗಿದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಿರ್ಮಾಣಕ್ಕೆ ಹಿಂದೂಗಳನ್ನು ದುರ್ಬಲಗೊಳಿಸುವ, ಒಡೆದಾಳುವ ಕಾಂಗ್ರೆಸ್ ನೀತಿಯಿಂದ ಕಾರಣವಾಗಿದೆ. ಹಿಂದೂಗಳು ಒಗ್ಗಟ್ಟಾಗಿದ್ದರೆ ಪಾಕಿಸ್ತಾನ ಎನ್ನುವ ವಿಷಯವೇ ಪ್ರಸ್ತಾಪವಾಗುತ್ತಿರಲಿಲ್ಲ. ಕಾಂಗ್ರೆಸ್ ಕೋಮುವಾದಿ ರಾಜಕಾರಣದಿಂದ ದೇಶ ವಿಭಜನೆಯಾಗಿದೆ’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT