ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಳೆಹೊನ್ನೂರು: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Last Updated 13 ಏಪ್ರಿಲ್ 2022, 3:55 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ ಎಂದು ಆರೋಪಿಸಿ ಪಟ್ಟಣದ ಜೇಸಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನರಸಿಂಹರಾಜಪುರ ತಾಲ್ಲೂಕು ಕಾಂಗ್ರೆಸ್ ವಕ್ತಾರ ಹಿರಿಯಣ್ಣ ಮಾತನಾಡಿ, ‘ದಿನಬಳಕೆ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ನಿತ್ಯವೂ ಏರುತ್ತಿದೆ. ಇದರಿಂದಾಗಿ ಆಹಾರ ವಸ್ತುಗಳ ಬೆಲೆ ಗಗನಕ್ಕೇರಿದೆ. ಬಿಜೆಪಿ ಸರ್ಕಾರ ವಿದ್ಯುತ್ ಕಂಪನಿಗಳನ್ನು ಮುಂದಿನ ದಿನಗಳಲ್ಲಿ ಖಾಸಗೀಕರಣ ಮಾಡಲು ಹೊರಟಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಸ್ಥಾಪಿಸಿದ 400ಕ್ಕೂ ಅಧಿಕ ಸಾರ್ವಜನಿಕ ವಲಯದ ಕಂಪನಿಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಂಡವಾಳಶಾಹಿಗಳಿಗೆ ಮಾರಾಟ ಮಾಡಲು ಮುಂದಾಗಿದೆ’ ಎಂದರು.

ಬೆಲೆ ಏರಿಕೆ ಬಗ್ಗೆ ಬಿಜೆಪಿ ಮುಖಂಡರು ಧ್ವನಿ ಎತ್ತದೇ ಮೌನವಾಗಿದ್ದು, ಜನರ ದಿಕ್ಕು ತಪ್ಪಿಸಲು ಹಿಜಾಬ್, ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧದ ಮೂಲಕ ಕೋಮು ಸೌಹಾರ್ದತೆ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ಪಾತಾಳಕ್ಕಿಳಿದಿದೆ. ಪಕ್ಷಭೇದ ಮರೆತು ಹೋರಾಟ ನಡೆಸಬೇಕಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಎಂ ನಟರಾಜ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎಸ್.ಜಯಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹಮ್ಮದ್ ಜುಹೇಬ್, ಇಬ್ರಾಹಿಂ ಶಾಫಿ, ರಂಜಿತಾ, ಸಿಸಿಲಿಯಾ, ಕವಿತಾ, ಸರಿತಾ ಸದಾಶಿವ, ಶಿವಪ್ಪ, ಮಹಮ್ಮದ್ ಆಲಿ, ಜಾನ್ ವಿಲ್ಫ್ರೆಡ್ ಡಿಸೋಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT