ಭಾನುವಾರ, ಸೆಪ್ಟೆಂಬರ್ 26, 2021
23 °C

ಚಿಕ್ಕಮಗಳೂರು: ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲಾಡಳಿತ ವಿಧಿಸಿರುವ ಮಾರ್ಗಸೂಚಿಗಳನ್ನು ಪ್ರವಾಸಿಗರು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗ ಜಿಲ್ಲಾ ಘಟಕದವರು ತಾಲ್ಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ಪ್ರತಿಭಟನೆ ನಡೆಸಿದರು.

ಕೈಮರ ಚೆಕ್ ಪೋಸ್ಟ್ ಬಳಿ ಪ್ರವಾಸಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಬಹಳಷ್ಟು ಪ್ರವಾಸಿಗರು ಕೋವಿಡ್ ನೆಗೆಟಿವ್ (ಆರ್‌ಟಿ-ಪಿಸಿಆರ್) ವರದಿ ತರುತ್ತಿಲ್ಲ, ಗುಂಪುಗುಂಪಾಗಿ ಓಡಾಡುತ್ತಾರೆ, ಹಲವರು ಮುಖಗವುಸನ್ನು ಧರಿಸಿರುವುದಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು