ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: 4 ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ- ಮಧು ಬಂಗಾರಪ್ಪ

Published 28 ನವೆಂಬರ್ 2023, 15:33 IST
Last Updated 28 ನವೆಂಬರ್ 2023, 15:33 IST
ಅಕ್ಷರ ಗಾತ್ರ

ಬಾಳೆಹೊನ್ನೂರು; ‘ಬರುವ ಲೋಕಸಭಾ ಚುನಾವಣೆಯಲ್ಲಿ ಕರಾವಳಿ, ಶಿವಮೊಗ್ಗ ಸೇರಿದಂತೆ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯ ಸಾಧೊಸಲಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರೆಂಟಿಗಳ ಬಗ್ಗೆ ಪಕ್ಷದ ಕಾರ್ಯಕರ್ತರು ಮನೆಗೆ ತೆರಳಿ ಅರಿವು ಮೂಡಿಸುವ ಕೆಲಸ ಮಾಡಬೇಕು’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ಕಡ್ಲೆಮಕ್ಕಿಯಲ್ಲಿರುವ ಒಕ್ಕಲಿಗರ ಸಭಾ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗ ಮಾತನಾಡಿ, ‘ಜಿಲ್ಲೆಯಲ್ಲಿ ರೈತರು ಜೀವನೋಪಾಯಕ್ಕಾಗಿ ಒತ್ತುವರಿ ಮಾಡಿಕೊಂಡ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ತೆರವು ಮಾಡಬಾರದು’ ಎಂದು ಒತ್ತಾಯಿಸಿದರು.

94ಸಿ ಅಡಿಯಲ್ಲಿ ಮಂಜೂರಾತಿ ಪಡೆಯಲು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು ಎಂಬ ಜಿಲ್ಲಾಧಿಕಾರಿಗಳ ಆದೇಶವನ್ನು ವಾಪಸ್ಸು ಪಡೆಯಬೇಕು. ಸರ್ಕಾರ ಘೋಷಿಸಿದ ಎಲ್ಲಾ ಆಶ್ವಾಸನೆಗಳನ್ನೂ ಜಾರಿಗೆ ತರಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎಮ್.ಸತೀಶ್ ಒತ್ತಾಯಿಸಿದರು.

ಅನಿವಾಸಿ ಭಾರತೀಯ ಸಮಿತಿ ಅಧ್ಯಕ್ಷೆ ಆರತಿಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಅಯನೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್, ಡಿ.ಕೆ.ತಾರಾದೇವಿ, ಶಾಸಕ ಟಿ.ಡಿ.ರಾಜೇಗೌಡ, ಶಿವಾನಂದಸ್ವಾಮಿ, ಮೈಸೂರು ಲಕ್ಷಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT