ಚಿಕ್ಕಮಗಳೂರು: ಎರಡು ಗುಂಪುಗಳ ಘರ್ಷಣೆ ನಡುವೆ ನಡೆದ ಘರ್ಷಣೆಯಲ್ಲಿ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯ ಗಣೇಶಗೌಡ(38) ಹತ್ಯೆಯಾಗಿದ್ದಾರೆ.

ಬ್ಯಾನರ್ ಹಾಕಿದ್ದ ವಿಚಾರಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತು ಗಣೇಶ್ ನಡುವೆ ಶುಕ್ರವಾರ ಜಗಳ ನಡೆದಿತ್ತು. ತಡರಾತ್ರಿ ಕಲ್ಮುರುಡೇಶ್ಚರ ಮಠದ ಬಳಿ ಅವರನ್ನು ಕರೆಸಿಕೊಂಡು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಗಣೇಶ್ ಸಂಬಂಧಿಕರು ಆರೋಪಿಸಿದ್ದಾರೆ.

ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಗಣೇಶ್ ಆಕಾಂಕ್ಷಿಯಾಗಿದ್ದರು. ಘರ್ಷಣೆಯಲ್ಲಿ ಎದುರಾಳಿ ಗುಂಪಿನ ಇಬ್ಬರಿಗೆ ಗಾಯಗಳಾಗಿದ್ದು, ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

‘ಗಣೇಶ್ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಸಖರಾಯಪಟ್ಟಣ ಭಾಗದಲ್ಲಿ ಪಕ್ಷ ಸಂಘಟಿಸಿದ್ದರು. ಅವರನ್ನು ಕೊಲೆ ಮಾಡಿರುವ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಪೊಲೀಸರು ಬಂಧಿಸಿ ಶಿಕ್ಷೆ ಕೊಡಿಸಬೇಕು’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.