ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಯಥಾವತ್ತಾಗಿ ಜಾರಿಯಾದಾಗ ಶೋಷಿತರ ಏಳಿಗೆ ಸಾಧ್ಯ: ಕೆ.ಬಿ ಸುಧಾ

Published 26 ನವೆಂಬರ್ 2023, 16:13 IST
Last Updated 26 ನವೆಂಬರ್ 2023, 16:13 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ದೇಶದ ಸಂವಿಧಾನ ಯಥಾವತ್ತಾಗಿ ಜಾರಿಯಾದಾಗ ಶೋಷಿತ ಸಮುದಾಯದ ಏಳಿಗೆ ಸಾಧ್ಯ. ಆದ್ದರಿಂದ ಚುನಾವಣೆ ವೇಳೆ ವಿವೇಚನೆಯಿಂದ ಮತದಾನ ಮಾಡಬೇಕು’ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯ ಕಾರ್ಯದರ್ಶಿ ಕೆ.ಬಿ ಸುಧಾ ಅಭಿಪ್ರಾಯಪಟ್ಟರು.

ನಗರದ ಬಿಎಸ್‌ಪಿ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ‘ಸಂವಿಧಾನ ಸಮರ್ಪಣಾ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬಿ.ಆರ್.ಅಂಬೇಡ್ಕರ್ ಅವರು ಹಗಲಿರುಳು ಶ್ರಮಿಸಿ ಸರ್ವರಿಗೂ ಸಮಬಾಳು ಎಂಬ ಆಶಯವಿರುವ ಜಗತ್ತು ಒಪ್ಪುವ ಸಂವಿಧಾನವನ್ನು ದೇಶಕ್ಕೆ ಕೊಡುಗೆ ನೀಡಿದ್ದಾರೆ. ಈವರೆಗೂ ಅಧಿಕಾರ ನಡೆಸಿದ ರಾಜಕೀಯ ಪಕ್ಷಗಳು ಸಂವಿಧಾನವನ್ನು ಇಡಿಯಾಗಿ ಜಾರಿ ಮಾಡದೆ ಅನ್ಯಾಯ ಮಾಡುತ್ತಿವೆ’ ಎಂದು ಆರೋಪಿಸಿದರು.

‘ದೇಶದ ನಾಗರಿಕರಿಗೆ ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದೆ. ಚುನಾವಣೆ ವೇಳೆ ಹಣ, ಆಮಿಷಕ್ಕೆ ಬಲಿಯಾಗದೆ ವಿವೇಚನೆಯಿಂದ ಹಕ್ಕು ಚಲಾಯಿಸಬೇಕು. ಆಗ ಭ್ರಷ್ಟಾಚಾರ ರಹಿತ ಸದೃಢ ದೇಶ ಕಟ್ಟಲು ಸಾಧ್ಯವಾಗಲಿದೆ’ ಎಂದು ಹೇಳಿದರು.

ಈ ವೇಳೆ ದೇಶದ ಸಂವಿಧಾನ ರಕ್ಷಿಸುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪಕ್ಷದ ಅಸೆಂಬ್ಲಿ ಉಪಾಧ್ಯಕ್ಷ ಹೊನ್ನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಕೆ.ಎಸ್. ಮಂಜುಳಾ, ಆಸೆಂಬ್ಲಿ ಸಂಯೋಜಕ ಕೆ.ಆರ್ ಗಂಗಾಧರ್, ಪದಾಧಿಕಾರಿಗಳಾದ ನವೀನ್‌ಕುಮಾರ್, ವಸಂತ್, ಸಿದ್ದಯ್ಯ ರತ್ನಾ, ಕಲಾವತಿ, ರುಕ್ಮಿಣಿ, ನವೀನ್ ಕುಮಾರಿ ಇದ್ದರು.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆದರೂ ಅಸ್ಪೃಶ್ಯತೆ ಅಸಮಾನತೆ ಶೋಷಣೆ ಇಂದಿಗೂ ಜೀವಂತವಾಗಿದೆ. ಸಂವಿಧಾನ ಅಪಾಯದ ಅಂಚಿನಲ್ಲಿದೆ. ಅದನ್ನು ಉಳಿಸಲು ನಾವೆಲ್ಲರೂ ಮುಂದಾಗಬೇಕು.
ಕೆ.ಟಿ. ರಾಧಾಕೃಷ್ಣ, ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT