ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರಾತ್ರಿಯಿಡಿ ತಂಪೆರೆದ ಮಳೆ

Published 20 ಏಪ್ರಿಲ್ 2024, 5:14 IST
Last Updated 20 ಏಪ್ರಿಲ್ 2024, 5:14 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಡಿ ಗುಡುಗು–ಸಿಡಿಲು ಸಹಿತ ಅಬ್ಬರದಿಂದ ಮಳೆಯಾಗಿದ್ದು, ಧಾರಾಕಾರ ಮಳೆ ಎಲ್ಲೆಡೆ ತಂಪೆರೆದಿದೆ.

ಮಧ್ಯರಾತ್ರಿಯಿಂದ ಬೆಳಗಿನ ಜಾವ 5 ಗಂಟೆ ತನಕ ಮಳೆ ಸುರಿದಿದೆ. ಚಿಕ್ಕಮಗಳೂರು ನಗರ, ಆಲ್ದೂರು, ಬಾಳೆಹೊನ್ನೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ತರೀಕೆರೆ, ಬೀರೂರು, ಕಡೂರು, ಅಜ್ಜಂಪುರ ಸಹಿತ ಎಲ್ಲಾ ಭಾಗದಲ್ಲೂ ಮಳೆಯಾಗಿದೆ.

ಮಧ್ಯರಾತ್ರಿಯಿಂದ ಗುಡುಗು, ಸಿಡಿಲು, ಮಿಂಚಿನ ಅಬ್ಬರ ಜೋರಾಗಿತ್ತು. ಕೆಲವೆಡೆ ಜೋರು ಮಳೆಯಾಗಿದ್ದರೆ, ಹಲವೆಡೆ ಸಾಧಾರಣ ಮಳೆಯಾಗಿದೆ. ಕಳಸ ತಾಲ್ಲೂಕಿನ ಕೇಳಬೈಲ್ ಗ್ರಾಮದ ಬಾಬು ಎಂಬುವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ತರೀಕೆರೆ ಸುತ್ತಮುತ್ತ ಬಿರುಗಾಳಿ ಹೆಚ್ಚಿದ್ದರಿಂದ ಅಡಿಕೆ ಮರಗಳು, ವಿದ್ಯುತ್ ಕಂಬಗಳು ಉರಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT