ಮಂಗಳವಾರ, ಜೂನ್ 22, 2021
22 °C

ಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ಮಾಜಿ ಶಾಸಕ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತರೀಕೆರೆ:‘ಮನೆಯಲ್ಲಿ ಐಸೋಲೇಷನ್ ಮಾಡಿಕೊಳ್ಳಲು ವ್ಯವಸ್ಥೆಯಿಲ್ಲದ ಬಡ ವರ್ಗದವರಿಗೆ ಜಿಲ್ಲಾಡಳಿತ ಕೋವಿಡ್ ಕೇರ್ ಸೆಂಟರ್ ತೆರೆಯಲಿ’ ಎಂದು ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಇದೀಗ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಮುಚ್ಚಲಾಗಿದೆ. ಡಿಗ್ರೂಪ್ ನೌಕರರ ನೇಮಕಾತಿಯಾಗಿಲ್ಲ. ಸಾರ್ವಜನಿಕ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಪಟ್ಟಣದ ಪೂರ್ಣಕೋವಿಡ್ ಆಸ್ಪತ್ರೆಯನ್ನಾಗಿ ಮಾಡಬೇಕು. ಭದ್ರಾವತಿಯಿಂದ ಆಮ್ಲಜನಕ ಪೂರೈಕೆಯಾಗುತ್ತಿದ್ದು ವ್ಯತ್ಯಾಸವಾಗದಂತೆ ಎಚ್ಚರಿಕೆ ವಹಿಸಬೇಕು. ಪಟ್ಟಣದ ಆಯುಷ್ ಆಸ್ಪತ್ರೆಯನ್ನು ಸಾಮಾನ್ಯ ರೋಗಗಳ ಪರೀಕ್ಷೆಗೆ ಬಳಸಿಕೊಳ್ಳುವಂತೆ’ ಅವರು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು