ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿತಿ ಮೀರಿದ ಭ್ರಷ್ಟಾಚಾರ: ಆರೋಪ

Last Updated 8 ಜನವರಿ 2023, 7:15 IST
ಅಕ್ಷರ ಗಾತ್ರ

ತರೀಕೆರೆ: ತಾಲ್ಲೂಕು ಆಡಳಿತ ಸೌಧದಲ್ಲಿ ಭ್ರಷ್ಟಾಚಾರ ಮೀತಿ ಮಿರಿದೆ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ ತಾಳಿಕಟ್ಟೆ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕು ಕಚೇರಿಯಲ್ಲಿ ಬಗರ್ ಹುಕ್ಕಂ ಸಾಗುವಳಿ ಪತ್ರ ಕೊಡಲು ರೈತರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಇದರಲ್ಲಿ ಗ್ರಾಮ ಲೆಕ್ಕಾಧಿಕಾರಿ, ಸರ್ವೇಯರ್, ತಹಶೀಲ್ದಾರ್ ಜೊತೆ ಶಾಸಕರು ಭಾಗಿಯಾಗಿ ರೈತರಿಂದ ಹಣ ವಸೂಲಿ ಕೆಲಸ ಮಾಡುತ್ತಿದ್ದಾರೆ’ ಎಂದರು.

ಬಡವರಿಗೆ ಸಿಗುವ ಸಂಧ್ಯಾ ಸುರಕ್ಷಾ, ವಿಧವಾ ವೇತನ, ರೇಷನ್ ಕಾರ್ಡ್‌ ಸೇರಿದಂತೆ ಸರ್ಕಾರದ ಸೌಲಭ್ಯಕ್ಕೆ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕಿನ ರಸ್ತೆ ಕಾಮಗಾರಿಗಳು ಕಳಪೆಯಿಂದ ಕೊಡಿದ್ದು, ಇದು ಶಾಸಕರು ಮಾಡಿದ ಅಭಿವೃದ್ಧಿಯನ್ನು ತೋರಿಸುತ್ತದೆ. ತಾಲ್ಲೂಕಿನಲ್ಲಿ ಬಿಜೆಪಿ ಆಡಳಿತದ ವಿರೋಧಿ ಅಲೆ ನಿರ್ಮಾಣವಾಗಿದ್ದು, ಜನತೆ ಕಾಂಗ್ರೆಸ್‌ಗೆ ಮತ ನೀಡಲು ತೀರ್ಮಾನಿಸಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದರು.

ಮುಖಂಡರಾದ ಕಿರಣ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT