ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಇತ್ಯರ್ಥಕ್ಕಾಗಿ ಜು.12ರಂದು ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ನಡೆದ ‘ದೇಶಕ್ಕಾಗಿ 90 ದಿನಗಳ ಮಧ್ಯಸ್ಥಿಕೆ’ ವಿಶೇಷ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರತಿ ವರ್ಷ ನಾಲ್ಕು ಬಾರಿ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುತ್ತಿದೆ’ ಎಂದರು.

ಮೊದಲನೇ ಲೋಕ ಅದಾಲತ್ ಮಾ.8ರಂದು ನಡೆದಿದೆ. ಇದೀಗ ಎರಡನೇ ಲೋಕ ಅದಾಲತ್ ಜು.12ರಿಂದ ಆರಂಭವಾಗಲಿದೆ. ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಪ್ರಕರಣಗಳನ್ನು ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರ ಸಹಕಾರದಿಂದ ಕಳೆದ ಬಾರಿಯ ಲೋಕ ಅದಾಲತ್ನಲ್ಲಿ 3,064 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. 20,962 ಪ್ರಕರಣಗಳು ಸೇರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಸೇರಿದ ಒಟ್ಟು 24,026 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.

ಈ ಬಾರಿ ನಡೆಯಲಿರುವ ಲೋಕ ಅದಾಲತ್ನಲ್ಲಿ ಜಿಲ್ಲೆಯ ಎಲ್ಲಾ ಏಳು ತಾಲ್ಲೂಕುಗಳಿಗೆ ಸಂಬಂಧಿಸಿದ 39,937 ಪ್ರಕರಣಗಳು ಬಾಕಿ ಉಳಿದಿವೆ. ಈ ಪೈಕಿ ಶೇ 10ಕ್ಕಿಂತ ಹೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಲೇವಾರಿ ಮಾಡುವ ಯೋಚನೆ ಇದೆ. ಕೊಲೆ, ಅತ್ಯಾಚಾರ ರೀತಿಯ ಪ್ರಕರಣಗಳು ಲೋಕ ಅದಾಲತ್ನಲ್ಲಿ ತೀರ್ಮಾನ ಆಗುವುದಿಲ್ಲ ಎಂದರು.

ಮೋಟಾರು ವಾಹನ ಅಪಘಾತ, ಜೀವನಾಂಶ, ಆಸ್ತಿ ವಿಭಾಗದ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಈ ಅದಾಲತ್ನಲ್ಲಿ ವಿಲೇವಾರಿ ಮಾಡಬಹುದು ಎಂದು ತಿಳಿಸಿದರು.

ಲೋಕ ಅದಾಲತ್ನಲ್ಲಿ ತೀರ್ಮಾನ ಮಾಡಿದರೆ ಶೀಘ್ರ ಇತ್ಯರ್ಥವಾಗುತ್ತವೆ. ನ್ಯಾಯಾಲಯದ ಶುಲ್ಕ, ವಕೀಲರ ಶುಲ್ಕ ಇರುವುದಿಲ್ಲ. ಇಲ್ಲಿ ಇತ್ಯರ್ಥವಾದ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಎರಡೂ ಕಡೆಯ ಕಕ್ಷಿದಾರರ ನಡುವೆ ಬಾಂಧವ್ಯ ಉಳಿಯುತ್ತದೆ. ಕಕ್ಷಿದಾರರು ಈ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಮಾತನಾಡಿ, ‘ಸಂಘರ್ಷ ಎನ್ನುವುದು ಮಕ್ಕಳಿಂದ ಪ್ರಾರಂಭವಾಗುತ್ತದೆ. ಪೊಲೀಸ್ ಠಾಣೆ, ಆಸ್ಪತ್ರೆ, ನ್ಯಾಯಾಲಯಗಳಿಗೆ ಹೋಗುವ ಸನ್ನಿವೇಶವನ್ನು ಜನ ತಂದುಕೊಳ್ಳಬಾರದು’ ಎಂದರು.

ಲೋಕ ಅದಾಲತ್ ಮೂಲಕ ಸಂಧಾನ, ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಿಕೊಂಡು ಕಕ್ಷಿದಾರರು ಹಣ, ಸಮಯ ಉಳಿತಾಯ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಭಾನುಮತಿ, ನ್ಯಾಯಾಧೀಶರಾದ ಪ್ರಕಾಶ್, ಮಂಜುನಾಥ, ಕುಲಕರ್ಣಿ, ಗುರುಪ್ರಸಾದ್, ರಾಘವೇಂದ್ರ, ಸುಜಾತ, ದ್ಯಾವಪ್ಪ, ಲತಾ, ಅನುರಾಧಾ, ಶರತ್ಕುಮಾರ್, ನಂದಿನಿ ಭಾಗವಹಿಸಿದ್ದರು.

90 ದಿನಗಳ ವಿಶೇಷ ಅಭಿಯಾನ

ಸುಪ್ರೀಂ ಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆಯಲ್ಲಿ ಪ್ರಕರಣಗಳ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ‘ದೇಶಕ್ಕಾಗಿ 90 ದಿನಗಳ ಮಧ್ಯಸ್ಥಿಕೆ’ ವಿಶೇಷ ಅಭಿಯಾನವನ್ನು ಕಾನೂನು ಸೇವಾ ಪ್ರಾಧಿಕಾರದಿಂದ ನಡೆಸಲಾಗುತ್ತಿದೆ ಎಂದು ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು. ಅಪಘಾತ ಪ್ರಕರಣ ಕೌಟುಂಬಿಕ ದೌರ್ಜನ್ಯ ಚೆಕ್ ಬೌನ್ಸ್ ಪ್ರಕರಣ ವಾಣಿಜ್ಯ ಕಲಹ ಸೇವಾ ವಿಷಯದ ಪ್ರಕರಣ ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣ ಗ್ರಾಹಕರ ವ್ಯಾಜ್ಯ ಸಾಲ ಮರುಪಾವತಿ ವ್ಯಾಜ್ಯ ವಿಭಾಗದ ದಾವೆ ಭೂಸ್ವಾಧೀನ ದಾವೆ ಸಿವಿಲ್ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು. ಅಕ್ಟೋಬರ್ 7ರವರೆಗೆ ಈ ಅಭಿಯಾನ ನಡೆಯಲಿದೆ. ಪ್ರಕರಣಗಳ ಸ್ವರೂಪವನ್ನು ಗುರುತಿಸಿ ಅವುಗಳನ್ನು ಮಧ್ಯಸ್ಥಿಕೆದಾರರಿಗೆ ಕಳುಹಿಸಲಾಗುವುದು. ವಾರದ ಏಳು ದಿನಗಳಲ್ಲಿ ಮಧ್ಯಸ್ಥಿಕಾ ಕೇಂದ್ರ ಕಾರ್ಯ ನಿರ್ವಹಿಸಲಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.