ಭಾನುವಾರ, ಸೆಪ್ಟೆಂಬರ್ 20, 2020
21 °C

ಕೋವಿಡ್‌: ಇಬ್ಬರು ಸಾವು, 113 ಮಂದಿಗೆ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್‌–19ನಿಂದಾಗಿ ಇಬ್ಬರು ಭಾನುವಾರ ಸಾವಿಗೀಡಾಗಿದ್ದಾರೆ. 113 ಮಂದಿಗೆ ಸೋಂಕು ದೃಢಪಟ್ಟಿದೆ, 20 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಖರಾಯಪಟ್ಟಣದ 58 ವರ್ಷದ ಮಹಿಳೆ ಹಾಗೂ ತರೀಕೆರೆ ತ್ಯಾಗರಾಜನಗರದ 57 ವರ್ಷದ ಪುರುಷ ಮೃತಪಟ್ಟವರು.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 40, ಕಡೂರು– 34, ತರೀಕೆರೆ– 22, ಮೂಡಿಗೆರೆ– 8, ಅಜ್ಜಂಪುರ– 7 ಹಾಗೂ ಶೃಂಗೇರಿ– ಇಬ್ಬರಿಗೆ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ 884 ಸಕ್ರಿಯ ಪ್ರಕರಣಗಳು ಇವೆ. ಈವರೆಗೆ 634 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 33 ಮಂದಿ (ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ಸಹಿತ) ಸಾವಿಗೀಡಾಗಿದ್ದಾರೆ. ಜಿಲ್ಲೆಯ ವಿವಿಧೆಡೆ 487 ನಿಯಂತ್ರಿತ ವಲಯ(ಕಂಟೈನ್‌ಮೆಂಟ್‌ ಝೋನ್‌)ಗಳು ಇವೆ. ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 1569ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಾಣು ಸೋಂಕು ಪರೀಕ್ಷೆ ನಿಟ್ಟಿನಲ್ಲಿ ಭಾನುವಾರ 210 ಮಂದಿಯ ಗಂಟಲು ಮತ್ತು ಮೂಗಿನ ದ್ರವ ಮಾದರಿ ಸಂಗ್ರಹಿಸಲಾಗಿದೆ.

ಭಾನುವಾರ ಬಂದಿರುವ ವರದಿಯಲ್ಲಿ 146 ಮಂದಿಗೆ ನೆಗೆಟಿವ್‌ ಬಂದಿದೆ. ಇನ್ನು 586 ಮಂದಿಯ ವರದಿ ಬರಬೇಕಿದೆ. 193 ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್‌ಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್‌.ಕೆ.ಮಂಜುನಾಥ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು