ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರಿನಲ್ಲಿ 145 ಮಂದಿಗೆ ಕೋವಿಡ್‌ ದೃಢ

ಜಿಲ್ಲೆಯಲ್ಲಿ 817 ಸಕ್ರಿಯ ಪ್ರಕರಣ; 136 ಮಂದಿ ಗುಣಮುಖ
Last Updated 18 ಆಗಸ್ಟ್ 2020, 16:17 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗ ಳವಾರ 145 ಮಂದಿಗೆ ಕೋವಿಡ್‌ ದೃಢಪಟ್ಟಿದೆ, 136 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಕಡೂರು– 56, ಚಿಕ್ಕಮಗಳೂರು– 43, ತರೀಕೆರೆ– 37, ಮೂಡಿಗೆರೆ– 5, ಎನ್‌.ಆರ್‌.ಪುರ– 2, ಕೊಪ್ಪ ಮತ್ತು ಶೃಂಗೇರಿ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ 817 ಸಕ್ರಿಯ ಪ್ರಕರಣಗಳು ಇವೆ. ಈವರೆಗೆ 1415 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 51ಮಂದಿ (ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ಸಹಿತ) ಸಾವಿಗೀಡಾ ಗಿದ್ದಾರೆ. ಜಿಲ್ಲೆಯ ವಿವಿಧೆಡೆ 458 ನಿಯಂತ್ರಿತ ವಲಯ(ಕಂಟೈನ್‌ಮೆಂಟ್‌ ಝೋನ್‌)ಗಳು ಇವೆ. ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 2417ಕ್ಕೆ ಏರಿಕೆಯಾಗಿದೆ. ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲ್ಲೂಕುಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

3 ಮಂದಿಗೆ ಸೋಂಕು

ಶೃಂಗೇರಿ: ಶೃಂಗೇರಿ ಪಟ್ಟಣದಲ್ಲಿ 3 ಮಂದಿಗೆ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ.

ಶಿವಮೊಗ್ಗದಿಂದ ಬಂದಿದ್ದ 35 ವರ್ಷದ ವ್ಯಕ್ತಿ, ಪಟ್ಟಣದ ಹೋಟೆಲ್ ಮಾಲೀಕ 55 ವರ್ಷದ ವ್ಯಕ್ತಿ, 33 ವರ್ಷದ ವ್ಯಕ್ತಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತರನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯಧಿಕಾರಿ ಡಾ.ಟಿ.ಡಿ ಮಂಜುನಾಥ್ ತಿಳಿಸಿದ್ದಾರೆ.

56 ಕೋವಿಡ್‌ ಪತ್ತೆ

ಕಡೂರು: ತಾಲ್ಲೂಕಿನಲ್ಲಿ ಮಂಗಳವಾರ 56 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ. ಕಡೂರು ಪಟ್ಟಣದಲ್ಲಿ 26 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಸಿಂಗಟಗೆರೆ, ಯಲ್ಲಂಬಳಸೆ, ಸಖರಾಯಪಟ್ಟಣ, ಬೀರೂರು, ಯಗಟಿ, ನಿಡಘಟ್ಟ, ಗ್ರಾಮಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣ ಪತ್ತೆಯಾಗಿವೆ.

ಒಬ್ಬರಿಗೆ ಕೋವಿಡ್

ಕೊಪ್ಪ: ಪಟ್ಟಣದ ಕಾಳಿದಾಸ ರಸ್ತೆ ನಿವಾಸಿ 33 ವರ್ಷದ ವ್ಯಕ್ತಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯನ್ನು ಹೋಂಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

5 ಮಂದಿಯಲ್ಲಿ ಸೋಂಕು ದೃಢ

ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ ಒಟ್ಟು 5 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ ಮಂಗಳವಾರದ ವರದಿಯಿಂದ ತಿಳಿದು ಬಂದಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಮುತ್ತಿನಕೊಪ್ಪದ 22 ವರ್ಷದ ಮಹಿಳೆ, 27 ವರ್ಷದ ಯುವಕ, 60 ವರ್ಷದ ಪುರುಷ ಹಾಗೂ 52 ವರ್ಷದ ಮಹಿಳೆಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದ್ದು. ಎಲ್ಲರನ್ನೂ ಮನೆಯಲ್ಲಿಯೇ ನಿಗಾ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT