ಬುಧವಾರ, ಜನವರಿ 19, 2022
18 °C

ಚಿಕ್ಕಮಗಳೂರು: ನವೋದಯ ಸಿಬ್ಬಂದಿ ಕುಟುಂಬದ 7 ಮಂದಿಗೆ ಕೋವಿಡ್; 110 ಸೋಂಕಿತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸೀಗೊಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 110ಕ್ಕೆ ಏರಿದೆ. 

ಮಂಗಳವಾರ ಏಳು ಮಂದಿಗೆ ಸೋಂಕು ದೃಢಪಟ್ಟಿದೆ. ಕೋವಿಡ್‌ ದೃಢಪಟ್ಟಿದ್ದ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದ 22 ಮಂದಿ ಮಾದರಿಯನ್ನು ಡಿ.6ರಂದು ಪರೀಕ್ಷೆಗೆ ರವಾನಿಸಲಾಗಿತ್ತು. ಈ ಪೈಕಿ ಏಳು ಮಂದಿಗೆ ಸೋಂಕು ಪತ್ತೆಯಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನ ಜವಾಹರ್‌ ನವೋದಯ ವಿದ್ಯಾಲಯದಲ್ಲಿ 69 ಮಂದಿಗೆ ಕೋವಿಡ್ ದೃಢ

ಈ ಏಳು ಮಂದಿಯನ್ನು ವಿದ್ಯಾಲಯದ ವಸತಿಗೃಹದಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಎಲ್ಲ110 ಸೋಂಕಿತರು ಇರಲು ವಿದ್ಯಾಲಯದ ವಿವಿಧ ಬ್ಲಾಕ್‌ಗಳಲ್ಲಿ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್‌.ಎನ್‌.ಉಮೇಶ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು