ಭಾನುವಾರ, ಅಕ್ಟೋಬರ್ 17, 2021
23 °C

ಅಳಲಗೆರೆ: ಮೊರಾರ್ಜಿ ವಸತಿ ಶಾಲೆಯ 28 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನರಸಿಂಹರಾಜಪುರ: ತಾಲ್ಲೂಕಿನ ಅಳಲಗೆರೆ ಗ್ರಾಮದಲ್ಲಿ ಮೊರಾರ್ಜಿ ವಸತಿ ಶಾಲೆಯ 28 ವಿದ್ಯಾರ್ಥಿಗಳಿಗೆ ಸೋಮವಾರ ಕೋವಿಡ್ ದೃಢಪಟ್ಟಿದೆ.

ಇಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ 200 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, 28 ಮಕ್ಕಳಿಗೆ ಕೋವಿಡ್  ದೃಢಪಟ್ಟಿದೆ. ಇದರಲ್ಲಿ 19 ಬಾಲಕರು, 9 ಬಾಲಕಿಯರು ಸೇರಿದ್ದಾರೆ. ಇನ್ನೂ 30 ವಿದ್ಯಾರ್ಥಿಗಳ ಕೋವಿಡ್ ವರದಿ ಬರಬೇಕಾಗಿದೆ.

ಕೋವಿಡ್ ದೃಢಪಟ್ಟಿರುವುದರಿಂದ ಮೊರಾರ್ಜಿ ಶಾಲೆಯಲ್ಲಿ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಿ, ಪ್ರತ್ಯೇಕ ವಾಸಕ್ಕೆ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ಮಕ್ಕಳ ಆರೋಗ್ಯದ ಮೇಲೆ ನಿಗಾ ಇಡಲು ಮಕ್ಕಳ ತಜ್ಞ ಡಾ.ಪ್ರಭು ನೇತೃತ್ವದಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಾಸಕ ರಾಜೇಗೌಡ ಭೇಟಿ: ಶಾಸಕ ಟಿ.ಡಿ.ರಾಜೇಗೌಡ ಅವರು ‌ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಧೈರ್ಯ ತುಂಬಿದ್ದಾರೆ.

‘ಜ್ವರ ಕಾಣಿಸಿಕೊಂಡಿರುವ ಮಕ್ಕಳಿಗೆ ರಕ್ತ ಪರೀಕ್ಷೆ ನಡೆಸಲು ವೈದ್ಯರಿಗೆ ಸೂಚಿಸಲಾಗಿದೆ. ಕೋವಿಡ್ ಬಾಧಿತ ಮಕ್ಕಳು ಸಹ ಲವಲವಿಕೆಯಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ವೀರಪ್ರಸಾದ್, ತಾಲ್ಲೂಕು ಪಂಚಾಯಿತಿ ಇಒ ನಯನಾ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರಗಪ್ಪ, ಪ್ರಾಂಶುಪಾಲ ಕೃಷ್ಣಮೂರ್ತಿ, ಮೆಣಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಾಥ್, ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದಾ, ಗ್ರಾಮ ಪಂಚಾಯಿತಿ ಸದಸ್ಯ ಸುನಿಲ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್.ಸದಾಶಿವ, ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಪ್ರಸಾದ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು