ಗುರುವಾರ , ಆಗಸ್ಟ್ 6, 2020
24 °C

ವೈದ್ಯ ಸಹಿತ ಮೂವರಿಗೆ ಸೋಂಕು– ಜಿಲ್ಲೆಯಲ್ಲಿ ಒಟ್ಟು ಪ್ರಕರಣ 83ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಶನಿವಾರ ವೈದ್ಯ ಸಹಿತ ಮೂವರಿಗೆ ಕೋವಿಡ್‌–19 ದೃಢಪಟ್ಟಿದೆ, ಏಳು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 37ಕ್ಕೆ ಇಳಿದಿದೆ.

ಬೆಂಗಳೂರಿನಿಂದ ನಗರಕ್ಕೆ ವಾಪಸಾಗಿದ್ದ ಖಾಸಗಿ ಆಸ್ಪತ್ರೆಯ 29 ವರ್ಷದ ವೈದ್ಯ (ಪಿ–19749), ತಾಲ್ಲೂಕಿನ ಕಳಾಸಪುರ ಬಳಿ ರಾಮ ದೇವರಹಳ್ಳಿಗೆ ಬಂದಿದ್ದ 56 ವರ್ಷದ ಪುರುಷ (ಪಿ–19750) ಹಾಗೂ ಅಜ್ಜಂಪುರ ತಾಲ್ಲೂಕಿನ ಚೌಳಹಿರಿ ಯೂರಿನ ಕೆಎಸ್‌ಆರ್‌ಟಿಸಿ ನೌಕರ 42 ವರ್ಷದ ಪುರುಷಗೆ (ಪಿ–197501) ಸೋಂಕು ಪತ್ತೆಯಾಗಿದೆ. ಮೂವರನ್ನೂ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿ ಸಂಗ್ರಹಿಸಲಾಗುತ್ತಿದೆ.

179 ಮಂದಿ ಗಂಟಲು ದ್ರವ ಪರೀಕ್ಷೆಗೆ ರವಾನೆ: ಕೊರೊನಾ ವೈರಾಣು ಸೋಂಕು ಪತ್ತೆ ನಿಟ್ಟಿನಲ್ಲಿ 179 ಮಂದಿಯ ಗಂಟಲು ಮತ್ತು ಮೂಗಿನ ದ್ರವ ಮಾದರಿಯನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಶನಿವಾರ ರವಾನಿಸಲಾಗಿದೆ.

30ಮಂದಿಯ ಗಂಟಲ ದ್ರವ ಮತ್ತು ಮೂಗಿನ ದ್ರವ ಮಾದರಿ ಪರೀಕ್ಷೆ ವರದಿ ಬಂದಿದ್ದು, ಸೋಂಕು ಪತ್ತೆಯಾಗಿಲ್ಲ. 2098 ಮಂದಿಯ ಮಾದರಿ ಪರೀಕ್ಷೆ ವರದಿ ಬರಬೇಕಿದೆ. 175ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್‌ಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್‌.ಕೆ.ಮಂಜುನಾಥ್‌ ತಿಳಿಸಿದ್ದಾರೆ.

ಅನ್ನಪೂರ್ಣ ಆಸ್ಪತ್ರೆ ನಿರ್ಬಂಧಿತ ವಲಯ: ಕೆ.ಎಂ.ರಸ್ತೆಯ (ಬೋಳರಾಮೇಶ್ವರ ದೇಗುಲ ಸಮೀಪ) ಅನ್ನಪೂರ್ಣ ಆಸ್ಪತ್ರೆಗೆ ಸಂಬಂಧಿಸಿದ ವೈದ್ಯರೊಬ್ಬರಿಗೆ ಕೋವಿಡ್‌ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಯನ್ನು ನಿರ್ಬಂಧಿತ ವಲಯವಾಗಿ ಘೋಷಿಸಲಾಗುವುದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು