ಶನಿವಾರ, ಜುಲೈ 24, 2021
22 °C

ಚಿಕ್ಕಮಗಳೂರು | ನಾಲ್ವರಿಗೆ ಕೋವಿಡ್‌ ದೃಢ, ಸೋಂಕಿತರ ಸಂಕ್ಯೆ 5ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ ನಾಲ್ವರಿಗೆ ಕೋವಿಡ್‌–19 ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ ಐದಕ್ಕೆ ಏರಿದೆ.

33 ವರ್ಷದ ಮಹಿಳೆ (ಪಿ–7273), 38 ವರ್ಷದ ಪುರುಷ (ಪಿ–7274), 12 ವರ್ಷದ ಬಾಲಕಿ (ಪಿ–7275) ಹಾಗೂ ಎಂಟು ವರ್ಷದ (ಪಿ–7276) ಬಾಲಕನಿಗೆ ಸೋಂಕು ದೃಢಪಟ್ಟಿದೆ. ಇವೆರಲ್ಲರನ್ನು ಚಿಕ್ಕಮಗಳೂರಿನ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದು ಕೊಪ್ಪದ ಹರಂದೂರಿನ ಕ್ವಾರಂಟೈನ್‌ ಕೇಂದ್ರದಲ್ಲಿದ್ದ ಮೂವರು, ತರೀಕೆರೆಯ ಕ್ವಾರಂಟೈನ್‌ ಕೇಂದ್ರದಲ್ಲಿದ್ದ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ತಿಳಿಸಿದ್ಧಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.