ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ

ಮೂಡಿಗೆರೆ: ಕೋವಿಡ್ ನಿಯಂತ್ರಣ ಸಭೆಯಲ್ಲಿ ಉಸ್ತುವಾರಿ ಸಚಿವ ಅಂಗಾರ ಸೂಚನೆ
Last Updated 12 ಮೇ 2021, 6:25 IST
ಅಕ್ಷರ ಗಾತ್ರ

ಮೂಡಿಗೆರೆ: ‘ಕೋವಿಡ್ ನಿಯಂತ್ರಣ ಕ್ಕಾಗಿ ಗ್ರಾಮಮಟ್ಟದಲ್ಲಿ ಪರಿಣಾಮಕಾರಿ ಯಾಗಿ ಕೆಲಸವಾಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಯ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಭಾಂ ಗಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಅವರು ಮಾತನಾಡಿದರು.

‘ಗ್ರಾಮಮಟ್ಟಕ್ಕೂ ಕೋವಿಡ್‌ ವ್ಯಾಪಿಸಿದ್ದು, ಗ್ರಾಮ ಗಳಲ್ಲಿ ಪರಿಣಾಮ ಕಾರಿಯಾಗಿ ನಿಯಂತ್ರಿಸದಿದ್ದರೆ ಮತ್ತಷ್ಟು ಉಲ್ಬಣಿಸುವ ಅಪಾಯವಿದೆ. ಪ್ರತಿ ಹೋಬಳಿ ಮಟ್ಟಕ್ಕೆ ನಿಯೋಜಿಸಿರುವ ಸೆಕ್ಟರ್ ಮ್ಯಾಜಿಸ್ಟ್ರೇಟರ್‌ಗಳು ಸಮರ್ಪಕ ವಾಗಿ ಕರ್ತವ್ಯವನ್ನು ನಿರ್ವಹಿಸಿ, ಕೋವಿಡ್ ನಿಯಂತ್ರಣ ಕ್ರಮಗಳು ಕಟ್ಟುನಿಟ್ಟಾಗಿ ಪಾಲನೆಯಾಗು ವಂತೆ ಮಾಡಬೇಕು’ ಎಂದು ಸೂಚಿಸಿದರು.

‘ಕಳೆದ ಬಾರಿ ಕೋವಿಡ್‌ ಸೋಂಕಿ ತರು ಹಾಗೂ ಅವರ ಮನೆಯವರನ್ನು ಸಂಶಯದಿಂದ ನೋಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈಗ ಜನರಲ್ಲಿ ಕೋವಿಡ್‌ ಭಯ ಮಾಯ ವಾಗಿದ್ದು, ಸೋಂಕು ಹೆಚ್ಚಳವಾಗಲು ಕಾರಣವಾಗಿದೆ. ಸೋಂಕಿತ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಬೇಕು. ಸೋಂಕಿತ ವ್ಯಕ್ತಿಗಳು, ಪ್ರಾಥಮಿಕ ಸಂಪರ್ಕ ಹೊಂದಿದವರು ಮನೆಯಿಂದ ಹೊರ ಬಂದರೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಬೇಕು’ ಎಂದರು.

‘ರಾಜ್ಯದಲ್ಲಿ ಆಮ್ಲಜನಕ ಕೊರತೆಯನ್ನು ನೀಗಿಸಲು ಸರ್ಕಾರವು ಸಂಪೂರ್ಣವಾಗಿ ಕ್ರಮ ಕೈಗೊಂಡಿದೆ. ಆದರೆ, ಕೇವಲ ಆಮ್ಲಜನಕದಿಂದ ಕೋವಿಡ್‌ ನಿಯಂತ್ರಿಸಲು ಸಾಧ್ಯವಿಲ್ಲ. ಗ್ರಾಮಮಟ್ಟದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ ಸಿಬ್ಬಂದಿ, ಗ್ರಾಮ ಲೆಕ್ಕಾಧಿಕಾರಿಗಳ ಮೂಲಕ ಹೊರಗಿನಿಂದ ಗ್ರಾಮಕ್ಕೆ ಬರುವವರ ಮೇಲೆ ನಿಗಾವಿಸಿಬೇಕು. ಬೆಂಗಳೂರು ಸೇರಿದಂತೆ ಹೊರಗಿನಿಂದ ಬರುವವರು ನೆಗೆಟಿವ್ ವರದಿ ಪಡೆದಿದ್ದರೂ, ಗ್ರಾಮಮಟ್ಟದಲ್ಲಿ ಇನ್ನೊಮ್ಮೆ ಪರೀಕ್ಷೆಗೊಳಪಡಿಸಿ, ನೆಗೆಟಿವ್ ಎಂಬುದನ್ನು ಖಾತರಿ ಪಡಿಸಿ
ಕೊಳ್ಳಬೇಕು. ದುಡಿಮೆಗಾಗಿ ಹೊರಗೆ ಹೋಗುವವರನ್ನು ತಡೆಯುವುದು ಬೇಡ. ಆದರೆ, ಗ್ರಾಮಗಳಿಗೆ ಬರುವ ವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಿ ಸೋಂಕು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡರೆ ಗ್ರಾಮಮಟ್ಟದಲ್ಲಿ ಸೋಂಕು ಉಲ್ಬಣವಾಗುವುದನ್ನು ತಡೆಯಬಹುದು’ ಎಂದರು.

ಸಭೆಗೂ ಮುನ್ನ ಮಹಾತ್ಮಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಶಾಸಕ ಎಂ.ಪಿ.ಕುಮಾರಸ್ವಾಮಿ, ತಹಶೀಲ್ದಾರ್ ಎಚ್.ಎಂ. ರಮೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಿ.ಡಿ.ಪ್ರಕಾಶ್, ಪೊಲೀಸ್ ಸರ್ಕಲ್ ಇನ್‌ಸ್ಪೆಕ್ಟರ್ ಜಗನ್ನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಂದ್ರೇಶ್, ಎಂಜಿಎಂ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶಾಂಭವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT