ಗುರುವಾರ , ಸೆಪ್ಟೆಂಬರ್ 23, 2021
20 °C
ಪರಿಶಿಷ್ಟ ಜಾತಿಯ ಯುವಕಗೆ ಮೂತ್ರ ನೆಕ್ಕಿಸಿದ ಪ್ರಕರಣ

ಚಿಕ್ಕಮಗಳೂರು: ಆರೋಪಿ ಪಿಎಸ್‌ಐಗೆ ಕೋವಿಡ್‌ ದೃಢ, ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಪರಿಶಿಷ್ಟ ಜಾತಿಯ ಯುವಕನಿಗೆ ಮೂತ್ರ ನೆಕ್ಕಿಸಿದ ಪ್ರಕರಣದ ಆರೋಪಿ ಪಿಎಸ್‌ಐ ಅರ್ಜುನ್‌ ಅವರಿಗೆ ಶುಕ್ರವಾರ ಕೋವಿಡ್‌ ದೃಢಪಟ್ಟಿದ್ದು, ಚಿಕಿತ್ಸೆಗೆ ಗುರುವಾರ ದಾಖಲಿಸಲಾಗಿದೆ.

ಜೈಲಿನಲ್ಲಿ ಅರ್ಜುನ್‌ ಅವರಿಗೆ ತಲೆನೋವು ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದಾಗ ಕೋವಿಡ್ ದೃಢಪಟ್ಟಿದೆ. ಕೋವಿಡ್‌ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಡಿಗೆರೆ ತಾಲ್ಲೂಕಿನ ಕಿರಗುಂದದ ಕೆ.ಎಲ್‌.ಪುನೀತ್‌ ಎಂಬುವವರಿಗೆ ಗೋಣಿಬೀಡು ಠಾಣೆಯಲ್ಲಿ ಮೂತ್ರ ನೆಕ್ಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಜುನ್‌ನನ್ನು ಬೆಂಗಳೂರಿನಲ್ಲಿ ಸೆ.1ರಂದು ಸಿಐಡಿ ಪೊಲೀಸರು ಬಂಧಿಸಿ, ಚಿಕ್ಕಮಗಳೂರಿನಲ್ಲಿ ನಗರದ ಒಂದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಅರ್ಜುನ್‌ ಅವರಿಗೆ ಮಧ್ಯಂತರ ಜಾಮೀನು ನೀಡಲು ನಗರದ ಒಂದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ನಿರಾಕರಿಸಿತ್ತು.

ಆರೋಪಿ ಅರ್ಜುನ್‌ ಅವರನ್ನು ಜೈಲಿನಲ್ಲಿ ಪ್ರತ್ಯೇಕವಾಗಿ ಇಡಲಾಗಿತ್ತು. ಅವರ ಸಂಪರ್ಕದಲ್ಲಿದ್ದವರನ್ನು ತಪಾಸಣೆ ಮಾಡಿಸಲಾಗುವುದು ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.