ಗುರುವಾರ , ಸೆಪ್ಟೆಂಬರ್ 23, 2021
24 °C

ಚಿಕ್ಕಮಗಳೂರು: ಕೋವ್ಯಾಕ್ಸಿನ್ ಲಸಿಕೆ ಖಾಲಿ, ಸಿಬ್ಬಂದಿಯೊಂದಿಗೆ ಜನರ ವಾಗ್ವಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಸಿಕೆ ಹಾಕಿಸಿಕೊಳ್ಳಲು ಟೋಕನ್ ಪಡೆದಿದ್ದವರು ಸಿಬ್ಬಂದಿಯೊಂದಿಗೆ ವಾಗ್ವಾದ

ಚಿಕ್ಕಮಗಳೂರು: ನಗರದ ಬೇಲೂರು ರಸ್ತೆಯ ಪಿಯು ಕಾಲೇಜಿನ ಲಸಿಕಾ ಕೇಂದ್ರದಲ್ಲಿ ಕೋವ್ಯಾಕ್ಸಿನ್ ಲಸಿಕೆ ಮುಗಿದಿದ್ದು, ಲಸಿಕೆ ಹಾಕಿಸಿಕೊಳ್ಳಲು ಟೋಕನ್ ಪಡೆದಿದ್ದವರು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.

'ಈ ಕೇಂದ್ರಕ್ಕೆ ಕೋವ್ಯಾಕ್ಸಿನ್ ಲಸಿಕೆ 1000 ಡೋಸ್ ಪೂರೈಸಿದ್ದರು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಖಾಲಿಯಾಗಿದೆ' ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಸೀಮಾ ತಿಳಿಸಿದರು.

'ಮೊದಲ ಡೋಸ್ ಹಾಕಿಸಿಕೊಂಡು 42 ದಿನ ಆಗಿದೆ. ಲಸಿಕೆ ಹಾಕುವುದಾಗಿ ಟೋಕನ್ ನೀಡಿದ್ದರು. ಈಗ ಖಾಲಿಯಾಗಿದೆ ಎಂದು ಸಬೂಬು ಹೇಳುತ್ತಾರೆ' ಎಂದು ಲಸಿಕೆ ಹಾಕಿಸಿಕೊಳ್ಳಲು ಬಂದಿದ್ದ ಅನಸೂಯಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು