ಶುಕ್ರವಾರ, ಆಗಸ್ಟ್ 19, 2022
27 °C
ಕೋವಿಡ್‌: 226 ಮಂದಿ ಗುಣಮುಖ

3 ಸಾವು, 199 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕೋವಿಡ್‌-19 ಸೋಂಕು ತಗುಲಿದ್ದ ಮೂವರು ಸಾವಿಗೀಡಾಗಿದ್ದಾರೆ. ಸೋಮವಾರ 199 ಮಂದಿಗೆ ಸೋಂಕು ದೃಢಪಟ್ಟಿದ್ದು, 226 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ರಂಗಾಪುರದ 62 ವರ್ಷದ ಮಹಿಳೆ (ಪಿ– 464310), ಚಿಕ್ಕಮಗಳೂರು ತಾಲ್ಲೂಕಿನ ಬೀಕನಹಳ್ಳಿಯ 52 ವರ್ಷದ ಪುರುಷ (ಪಿ– 448756), ಮೂಡಿಗೆರೆ ತಾಲ್ಲೂಕಿನ ಸಾರಗೋಡುಕುಂದೂರಿನ 45 ವರ್ಷದ ಪುರುಷ (ಪಿ– 478564) ಮೃತಪಟ್ಟವರು.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 74, ತರೀಕೆರೆ– 56, ಕಡೂರು– 40, ಕೊಪ್ಪ–10, ಮೂಡಿಗೆರೆ– 7, ಶೃಂಗೇರಿ ಹಾಗೂ ಎನ್‌.ಆರ್‌.ಪುರ–ತಲಾ ಆರು ಮಂದಿಗೆ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ 1,375 ಸಕ್ರಿಯ ಪ್ರಕರಣಗಳು ಇವೆ. 4,561 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 103 ಮಂದಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. 1,993 ನಿಯಂತ್ರಿತ ವಲಯಗಳು ಇವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು