ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್(ಡಿಸಿಸಿ) ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಭಾನುವಾರ ಆಯ್ಕೆಯಾದರು.

13 ನಿರ್ದೇಶಕರಿರುವ ಡಿಸಿಸಿ ಬ್ಯಾಂಕ್ನಲ್ಲಿ ಬಹುತೇಕರು ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ನಿರ್ದೇಶಕರಿದ್ದರು. ವಿಧಾನ ಪರಿಷತ್ ಸದಸ್ಯ(ಜೆಡಿಎಸ್) ಎಸ್.ಎಲ್. ಭೋಜೇಗೌಡ, ಬಿಜೆಪಿಯ ಮಾಜಿ ಶಾಸಕರಾದ ಡಿ.ಎಸ್. ಸುರೇಶ್, ಬೆಳ್ಳಿ ಪ್ರಕಾಶ್ ಕೂಡ ನಿರ್ದೇಶಕರಾಗಿದ್ದರು. ಶನಿವಾರ ರಾತ್ರಿ ನಡೆದ ಮೈತ್ರಿಕೂಟದ ಪ್ರಮುಖರ ಸಭೆಯಲ್ಲಿ ಸಿ.ಟಿ. ರವಿ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿತ್ತು.

ಅದರಂತೆ ಭಾನುವಾರ ಬೆಳಿಗ್ಗೆ ಅಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿ ನಾಮಪತ್ರ ಸಲ್ಲಿಸಿದ್ದರು. ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಘೋಷಣೆ ಮಾಡಿದರು. ಉಪಾಧ್ಯಕ್ಷರಾಗಿ ಎಚ್.ಕೆ. ದಿನೇಶ್ ಹೊಸೂರು ಅವರನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಕೊಪ್ಪ ಮಂಡಲ ಅಧ್ಯಕ್ಷರಾಗಿರುವ ಇವರು ಕಡೂರು ಶಾಸಕ ಕೆ.ಎಸ್.ಆನಂದ್ ವಿರುದ್ಧ ಎಲ್ಲಾ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್) ಕ್ಷೇತ್ರದಿಂದ ಜಯ ಸಾಧಿಸಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.