ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಟಿ.ರವಿಗೆ ಪರಿಷತ್ ಸ್ಥಾನ: ಪಟಾಕಿ ಸಿಡಿಸಿ ಸಂಭ್ರಮ

Published 2 ಜೂನ್ 2024, 13:11 IST
Last Updated 2 ಜೂನ್ 2024, 13:11 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನದ ಟಿಕೆಟ್ ಘೋಷಣೆಯಾದ ಬಳಿಗೆ ನಗರಕ್ಕೆ ಬಂದ ಸಿ.ಟಿ.ರವಿ ಅವರನ್ನು ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಸ್ವಾಗತಿಸಿದರು.

ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, '1995ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತದೆ. ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT