ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು | ಮಹಿಷ ದಸರಾ ಆಚರಣೆಗೆ ಯತ್ನ: ದಲಿತ ಮುಖಂಡರ ಬಂಧನ

Published : 20 ಅಕ್ಟೋಬರ್ 2023, 9:57 IST
Last Updated : 20 ಅಕ್ಟೋಬರ್ 2023, 9:57 IST
ಫಾಲೋ ಮಾಡಿ
Comments

ಚಿಕ್ಕಮಗಳೂರು: ನಿಷೇಧದ ನಡುವೆ ಮಹಿಷ ದಸರಾ ಆಚರಣೆಗೆ ಯತ್ನಿಸಿದ ದಲಿತ ಸಂಘಟನೆಗಳ ಮುಖಂಡರನ್ನು ಪೊಲೀಸ್ ಬಂಧಿಸಿದರು.

ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ತನಕ ಮೆರವಣಿಗೆ ನಡೆಸಲು ಮಹಿಷ ದಸರಾ ಆಚರಣಾ ಸಮಿತಿ ನಿರ್ಧರಿಸಿತ್ತು. ವಿಚಾರವಾದಿ ಕೆ.ಎಸ್.ಭಗವಾನ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದರು. ಇದಕ್ಕೆ ಶ್ರೀರಾಮ ಸೇನೆ ಮತ್ತು ಒಕ್ಕಲಿಗರ ಸಂಘ ವಿರೋಧ ವ್ಯಕ್ತಪಡಿಸಿತ್ತು.

ಮಹಿಷ ದಸರಾ ಪರ ಮತ್ತು ವಿರೋಧ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಇದರ ನಡುವೆ ಮಹಿಷಾಸುರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲು ಮುಂದಾದ ದಲಿತ ಸಂಘಟನೆಗಳ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

'ಮಹಿಷಾ ದಸರಾ ಆಚರಣೆಗೆ ಅನುಮತಿ ನೀಡದೆ ಜಿಲ್ಲಾಡಳಿತ ಸಂವಿಧಾನ ಉಲ್ಲಂಘಿಸಿದೆ. ಇದಕ್ಕೆ ದತ್ತ ಜಯಂತಿ ವೇಳೆ ಉತ್ತರ ನೀಡಲಾಗುವುದು. ದತ್ತ ಜಯಂತಿಗೆ ಪ್ರಮೋದ್ ಮುತಾಲಿಕ್ ಜಿಲ್ಲೆಗೆ ಬರಲು ಅವಕಾಶ ನೀಡುವುದಿಲ್ಲ' ಎಂದು ದಲಿತ ಮುಖಂಡರು ಎಚ್ಚರಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT