ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು | ದತ್ತ ಜಯಂತಿ: ಮಾಲೆಧಾರಣೆಗೆ ಚಾಲನೆ

Published 17 ಡಿಸೆಂಬರ್ 2023, 23:30 IST
Last Updated 17 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ನೇತೃತ್ವದಲ್ಲಿ ನಡೆಯುವ ದತ್ತ ಜಯಂತಿ ಮಾಲಧಾರಣೆ ಕಾರ್ಯಕ್ಕೆ ಭಾನುವಾರ ಚಾಲನೆ ದೊರೆಯಿತು. ಬಿಜೆಪಿ ಮುಖಂಡ ಸಿ.ಟಿ. ರವಿ ಸೇರಿ ನೂರಾರು ಕಾರ್ಯಕರ್ತರು ಮಾಲೆಧಾರಣೆ ಮಾಡಿಕೊಂಡರು.

ನಗರದ ಕಾಮಧೇನು ಗಣಪತಿ ದೇಗುಲದಲ್ಲಿ ದತ್ತಾತ್ರೇಯ ಸ್ವಾಮಿಗೆ ಪೂಜೆ ನೆರವೇರಿಸಲಾಯಿತು. ಇಂದಿನಿಂದ ಹತ್ತು ದಿನ ದತ್ತ ಜಯಂತಿ ಕಾರ್ಯಕ್ರಮಗಳು ನಡೆಯಲಿವೆ. 

25ರಂದು ಚಿಕ್ಕಮಗಳೂರಿನಲ್ಲಿ ಶೋಭಾಯಾತ್ರೆ, 26ರಂದು ದತ್ತ ಪಾದುಕೆ ದರ್ಶನವನ್ನು ದತ್ತ ಮಾಲಧಾರಿಗಳು ಮಾಡಲಿದ್ದಾರೆ.  ಮುಳ್ಳಯ್ಯನ ಗಿರಿ ಬಳಿಯ ಪ್ರವಾಸಿ ತಾಣಗಳಿಗೆ ಮುನ್ನೆಚ್ಚರಿಕೆಯಾಗಿ ಬೇರೆ ಪ್ರವಾಸಿಗರಿಗೆ ಡಿ.22ರಿಂದ 26ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ   

ಈ ಸಂದರ್ಭ ಮಾತನಾಡಿದ ಸಿ.ಟಿ.ರವಿ, ‘ದತ್ತಪೀಠಕ್ಕೆ ಸೇರಿದ ಚರಾಸ್ತಿ ಮತ್ತು 1,861 ಎಕರೆ ಸ್ಥಿರಾಸ್ತಿಯನ್ನು ಪ್ರಭಾವಿಗಳು ಕಬಳಿಸಿದ್ದಾರೆ. ಇವುಗಳ ಪರಿಶೀಲನೆಗೆ ಹಿಂದೆ ಸಮಿತಿ ರಚನೆಯಾಗಿತ್ತು. ಅಕ್ರಮ ನಡೆಸಿದರ ವಿರುದ್ಧ ಕ್ರಮ ಕೈಗೊಳ್ಳಬೇಕು‘ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT