ಮಂಗಳವಾರ, ಡಿಸೆಂಬರ್ 7, 2021
24 °C

ಚಿಕ್ಕಮಗಳೂರು: ನ.8ರಿಂದ ದತ್ತಮಾಲಾ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ಶ್ರೀರಾಮಸೇನೆ ವತಿಯಿಂದ ನವೆಂಬರ್ 8 ರಿಂದ 14ರವರೆಗೆ ಜಿಲ್ಲೆಯಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ ಎಂದು ಸಂಘಟನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಇಲ್ಲಿ ಸೋಮವಾರ ಹೇಳಿದರು.

8ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶಂಕರ ಮಠದಲ್ಲಿ ದತ್ತ ಮಾಲಾಧಾರಣೆ ನಡೆಯಲಿದೆ. 11ರಂದು ದತ್ತ ದೀಪೋತ್ಸವ ಜರುಗಲಿದೆ. 12ರಂದು ನಗರದಲ್ಲಿ ಪಡಿ ಸಂಗ್ರಹ, 14ರಂದು ದತ್ತ ಪೀಠದಲ್ಲಿ ಧಾರ್ಮಿಕ ಕೈಂಕರ್ಯ ಹಾಗೂ ಸಭೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘2019ರಲ್ಲಿ ದತ್ತ ಮಾಲಾ ಅಭಿಯಾನದ ಅಂಗವಾಗಿ ಏರ್ಪಡಿಸಿದ್ದ ಶೋಭಾಯಾತ್ರೆಯಲ್ಲಿ ಗುರುದತ್ತಾತ್ರೇಯರ ವಿಗ್ರಹವನ್ನು ಮೆರವಣಿಗೆ ನಡೆಸಲು ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಅದರ ಪ್ರತಿಭಟನಾರ್ಥವಾಗಿ ಈ ಭಾರಿ ಶೋಭಾಯಾತ್ರೆ ನಡೆಸುತ್ತಿಲ್ಲ’ ಎಂದರು.

ಸಂಘಟನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ, ಅಡ್ಯಾರ್, ಜಿಲ್ಲಾ ಘಟಕದ ಅಧ್ಯಕ್ಷ ರಂಜಿತ್‌ಶೆಟ್ಟಿ, ಸದಸ್ಯರಾದ ಜ್ಞಾನೇಂದ್ರ, ಪುನೀತ್, ಅರ್ಜುನ್, ದುರ್ಗಾ ಸೇನೆ ಜಿಲ್ಲಾಘಟಕದ ಅಧ್ಯಕ್ಷೆ ಶಾರದಮ್ಮ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು