ಜಿಲ್ಲಾಧಿಕಾರಿ ಶ್ರೀರಂಗಯ್ಯ ವರ್ಗಾವಣೆ

7

ಜಿಲ್ಲಾಧಿಕಾರಿ ಶ್ರೀರಂಗಯ್ಯ ವರ್ಗಾವಣೆ

Published:
Updated:

ಚಿಕ್ಕಮಗಳೂರು: ಐಎಎಸ್‌ ಆಧಿಕಾರಿ ಕೆ.ಎ.ದಯಾನಂದ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಸೋಮವಾರ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಅವರಿಗೆ ಸ್ಥಳ ತೋರಿಸಿಲ್ಲ. ಶ್ರೀರಂಗಯ್ಯ ಅವರು 2017 ಅಕ್ಟೋಬರ್‌ನಿಂದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ದಯಾನಂದ ಅವರು ಮೂಡಿಗೆರೆ ತಾಲ್ಲೂಕಿನ ಜನ್ನಾಪುರದ ಪ್ರೌಢಶಾಲೆಯಲ್ಲಿ ಎರಡು ವರ್ಷ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಚಿಕ್ಕಮಗಳೂರು ಉಪವಿಭಾಗಧಿಕಾರಿಯಾಗಿ 2007ರಿಂದ 211ರವರೆಗೆ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದರು.

ಶ್ರೀರಂಗಯ್ಯ ಅವರು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದೇನೆ. ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ತೃಪ್ತಿ ತಂದಿದೆ’ ಎಂದು ಹೇಳಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !