ಸೋಮವಾರ, ಏಪ್ರಿಲ್ 6, 2020
19 °C

ಕುಡಿದು ಆಸ್ಪತ್ರೆಯಲ್ಲಿ ಬೆತ್ತಲಾಗಿ ಮಲಗಿದ ವೈದ್ಯ: ಚಿಕಿತ್ಸೆ ಸಿಗದೆ ರೋಗಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಚನ್ನಕೇಶವಮೂರ್ತಿ ಶನಿವಾರ ರಾತ್ರಿ ಪಾನಮತ್ತರಾಗಿ ಕೊಠಡಿಯಲ್ಲಿ ನಗ್ನವಾಗಿ ಬಿದ್ದಿದ್ದು, ಈ ವೇಳೆ ಆಸ್ಪತ್ರೆಗೆ ಕರೆತರಲಾಗಿದ್ದ ಹೆಬ್ಬೂರಿನ ಪುಟ್ಟಮ್ಮ (70) ಎಂಬುವವರು ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ.

‘ಆಸ್ಪತ್ರೆಯಲ್ಲಿ ವೈದ್ಯರು ಅಸಭ್ಯ ವರ್ತನೆ ತೋರಿದ್ದಾರೆ ಮತ್ತು ಚಿಕಿತ್ಸೆ ನೀಡದೆ ಕರ್ತವ್ಯ ಪಾಲಿಸಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಮೃತರ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

‘ರಜೆ ಮೇಲೆ ತೆರಳುವಂತೆ ಡಾ.ಚನ್ನಕೇಶವಮೂರ್ತಿ ಅವರಿಗೆ ಸೂಚಿಸಿದ್ದೇನೆ. ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ಸಿಬ್ಬಂದಿ, ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುತ್ತೇನೆ. ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಕಠಿಣ ಕ್ರಮಕ್ಕೆ ಶಿಫಾರಸು ಮಾಡುತ್ತೇನೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು