ಚಿಕ್ಕಮಗಳೂರು: ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆ ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಮೃತಪಟ್ಟಿದೆ.

ಮೂಗ್ತಿಹಳ್ಳಿ ಬಳಿ ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ ತಂತಿ ಬೇಲಿ ದಾಟುವ ಪ್ರಯತ್ನದಲ್ಲಿ ಗಾಯಗೊಂಡಿತ್ತು. ಸ್ಥಳೀಯರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ಹಿಡಿದು ರಕ್ಷಣೆ ಮಾಡಲು ಪ್ರಯತ್ನಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಜಿಂಕೆಯನ್ನು ಪಶು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದರು. ನಾಯಿಗಳ ದಾಳಿಯಿಂದ ಗಾಬರಿಗೊಂಡಿದ್ದ ಜಿಂಕೆ ಆಘಾತಕ್ಕೆ ಒಳಗಾಗಿತ್ತು. ವೈದ್ಯರು ಬದುಕಿಸಲು ನಡೆಸಿದ ಪ್ರಯತ್ನ ವಿಫಲವಾಯಿತು. ಮರಣೋತ್ತರ ಪರೀಕ್ಷೆ ನಡೆಸಿ ಸಂಸ್ಕಾರ ನಡೆಸಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.