ಗುರುವಾರ , ಜನವರಿ 27, 2022
21 °C

ಅಂತರ್ಜಲಮಟ್ಟ‌ ವೃದ್ಧಿಗೆ ಪ್ರಾತ್ಯಕ್ಷಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೌರಿಬಿದನೂರು: ತಾಲ್ಲೂಕಿನ ವಾಟದಹೊಸಹಳ್ಳಿಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ನರೇಗಾ ಯೋಜನೆಯಡಿಯಲ್ಲಿ 'ಅಂತರ್ಜಲ ಚೇತನ' ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ವೈಜ್ಞಾನಿಕವಾಗಿ ಕ್ರಿಯಾಯೋಜನೆ ತಯಾರಿಸಲು ದಿಣ್ಣೆಯಿಂದ ತಗ್ಗು ಪ್ರದೇಶದಲ್ಲಿ ಅಂತರ್ಜಲ ಮಟ್ಟವನ್ನು ವೃದ್ಧಿಸುವ ಸಲುವಾಗಿ ಎರಡು ದಿನಗಳ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಪಂಚಾಯಿತಿ ಅಂತರ್ಜಲ ಚೇತನ ಎಫ್‌ಇಎಸ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಎಚ್.ಪಿ.ಪ್ರಸನ್ನಕುಮಾರ್ ಮಾತನಾಡಿ, ‘ಸರ್ಕಾರದ ಮಾರ್ಗಸೂಚಿಯಂತೆ ನರೇಗಾ ಯೋಜನೆಯ ಅಡಿಯಲ್ಲಿ 2022-23ನೇ ಸಾಲಿಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಕ್ರಿಯಾಯೋಜನೆ ತಯಾರಿಸಬೇಕು. ಈ ನಿಟ್ಟಿನಲ್ಲಿ ದಿಣ್ಣೆಯಿಂದ ತಗ್ಗು ಪ್ರದೇಶದವರೆಗೆ ಆಧಾರಿತ ಸಮುದಾಯ ಸಹಭಾಗಿತ್ವದೊಂದಿಗೆ ಅನುಸರಿಸಬಹುದಾದ ಹಂತಗಳನ್ನು ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ತಾಂತ್ರಿಕ ಸಿಬ್ಬಂದಿಗೆ ಅತ್ಯವಶ್ಯಕವಾಗಿದೆ’ ಎಂದರು.

ತರಬೇತಿಯಲ್ಲಿ ಸಂಸ್ಥೆಯ ತಾಂತ್ರಿಕ ಸಲಹೆಗಾರರಾದ ಕುಮಾರ್, ತಾ.ಪಂ ಸಹಾಯಕ ನಿರ್ದೇಶಕಿ ಎಂ.ಎಸ್.ವಿಜಯಲಕ್ಷ್ಮಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಇಂಜಿನಿಯರ್ ಗಳಾದ ಸುಜಯ್, ಅನಿಲ್, ಭರತ್, ಚಂದ್ರ, ಪ್ರಶಾಂತ್, ಮನೋಜ್, ನವೀನ್, ಮಧು, ನಂದಿನಿ, ಶಿಲ್ಪ, ಚೇತನ, ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು