ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಸಾಮಾಜಿಕ ಭದ್ರತಾ ವಿಭಾಗದ ಶಿರಸ್ತೇದಾರ್ (ಉಪತಹಶೀಲ್ದಾರ್) ಆಗಿದ್ದ ಬಿ.ಸಿ.ಕಲ್ಮರುಡಪ್ಪ ಅವರು ಲಾಗಿನ್ ದುರ್ಬಳಕೆ ಮಾಡಿಕೊಂಡು 35–40 ವಯಸ್ಸಿನವರಿಗೂ ವೇತನ ಮಂಜೂರು ಮಾಡಿದ್ದಾರೆ ಎಂಬ ದೂರುಗಳು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿದ್ದವು.