ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ, ಜಾಗೃತಿ

ಗೌಡನಹಳ್ಳಿ ಕೈಗಾರಿಕಾ ಪ್ರದೇಶ: ಅಣಕು ಪ್ರದರ್ಶನ
Last Updated 30 ಜುಲೈ 2022, 3:20 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ವಿಪತ್ತು ನಿರ್ವಹಣಾ ಪ್ರಾಧಿಕಾರದ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಗೌಡನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಲೈಫ್‌ಲೈನ್‌ ಫೀಡ್ಸ್‌ ಸಂಸ್ಥೆ ಆವರಣದಲ್ಲಿ ರಾಜ್ಯಮಟ್ಟದ ‘ವಿಪತ್ತುಗಳ ಅಣಕು’ ಪ್ರದರ್ಶನ ಮತ್ತು ಜಾಗೃತಿ ನಡೆಯಿತು.

ವಿಪತ್ತಿನ ಸಮಯದಲ್ಲಿ ಅನಾಹುತಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತು ಅಣುಕು ಪ್ರದರ್ಶನದ ಮೂಲಕ ಪ್ರಾತ್ಯಕ್ಷಿಕೆ ತೋರಿಸಲಾಯಿತು.

ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಮಾತನಾಡಿ, ವಿಪತ್ತು ನಿರ್ವಹಣೆ ಸವಾಲಿನ ಕೆಲಸ. ವಿಕೋಪ ಸಂದರ್ಭಗಳನ್ನು ಎದುರಿಸಲು ಸಿದ್ಧವಾಗಿರಬೇಕು. ಸಂವಹನ, ಸಮಚಿತ್ತದಿಂದ ಸಮರ್ಥ ನಿರ್ವಹಣೆ ಸಾಧ್ಯವಾಗಲಿದೆ ಎಂದರು.

ಪ್ರವಾಹ, ಭೂಕುಸಿತ, ಭೂಕಂಪ, ಅಗ್ನಿ ಅವಘಡ, ಕಾಡ್ಗಿಚ್ಚು, ರಾಸಾಯನಿಕ ಸೋರಿಕೆಯಂಥ ಅವಘಡಗಳು ಸಂಭವಿಸಿದಾಗ ಅವುಗಳನ್ನುಎದುರಿಸಲು ಜಿಲ್ಲಾ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ತಂಡ ಇದೆ. ಅವಘಡಗಳು ಸಂಭವಿಸಿದಾಗ ತುರ್ತು ಸಂಖ್ಯೆಗಳಿಗೆ ಕರೆ ಮಾಡಿ ತಿಳಿಸಬೇಕು. ತ್ವರಿತವಾಗಿ ಸ್ಪಂದಿಸಲು ಅನುಕೂಲವಾಗುತ್ತದೆ ಎಂದರು.

1984 ರ ಭೂಪಾಲ್ ವಿಷಾನಿಲ ದುರಂತದ ಬಳಿಕ ಸರ್ಕಾರ ‘ವಿಪತ್ತು ನಿರ್ವಹಣೆ ಕಾಯ್ದೆ’ ರೂಪಿಸಿದೆ. ವಿಪತ್ತು ನಿರ್ವಹಣೆ ಅಣಕು ಪ್ರದರ್ಶನ ಏರ್ಪಡಿಸುವುದರಿಂದ ಜಾಗೃತಿ ಮೂಡುತ್ತದೆ. ವಿಪತ್ತು ಸಂಭವಿಸಿದಾಗ ಯಾರನ್ನು ಸಂಪರ್ಕಿಸಬೇಕು? ಕಾರ್ಯಾಚರಣೆ ತಂಡದವರು ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತಾರೆ, ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳುತ್ತಾರೆ ಮುಂತಾದ ಉಪಯುಕ್ತ ವಿಚಾರಗಳ ಬಗ್ಗೆ ಮಾಹಿತಿ ದೊರೆಯುತ್ತದೆ ಎಂದರು.

ರಾಸಾಯನಿಕ ಸೋರಿಕೆ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕ್ರಮಗಳು, ಕೆಲಸಗಾರರನ್ನು ಸಿದ್ಧಗೊಳಿಸುವುದು, ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ವಹಿಸಬೇಕಾದ ಪಾತ್ರಗಳ ಕುರಿತು ಅಣಕು ಪ್ರದರ್ಶನದಲ್ಲಿ ಪ್ರಾತ್ಯಕ್ಷಿಕೆ ತೋರಿಸಲಾಯಿತು.

ಉಪವಿಭಾಗಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜ್‌, ಜಿಲ್ಲಾ ವಿಪತ್ತು ನಿರ್ವಹಣಾ ವಿಭಾಗದ ಸಿ.ದೀಕ್ಷಿತ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ವಿ.ತಿರುಮಲೇಶ್, ಅಗ್ನಿಶಾಮಕ ಠಾಣೆಯ ಅಧಿಕಾರಿಗಳಾದ ತಿಪ್ಪೇಸ್ವಾಮಿ, ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT