ಶುಕ್ರವಾರ, ಮೇ 29, 2020
27 °C

ರೈತರಿಗೆ ಕೃಷಿ ಪರಿಕರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶೃಂಗೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ₹ 50,000 ಮೊತ್ತದ ಕೃಷಿ ಪರಿಕರಗಳನ್ನು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಫಲಾನುಭವಿಗಳಾದ ಹೊನ್ನವಳ್ಳಿ ಶ್ರೀನಿವಾಸ್‍ ನಾಯ್ಕ್ ಮತ್ತು ಕೆಸರಕೂಡಿಗೆ ಚಂದ್ರ ನಾಯ್ಕ್ ಅವರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಶಿವಶಂಕರ್ ವಿತರಿಸಿದರು.

ನಂತರ ಅವರು ಮಾತನಾಡಿ, ‘ಕೊರೊನಾ ವೈರಸ್‌ ಸೋಂಕಿನ ಭೀತಿಯ ನಡುವೆ ಸರ್ಕಾರವು ರೈತರ ಪರವಾಗಿದ್ದು, ಕೃಷಿ ಚಟುವಟಿಕೆಗೆ ಪೂರಕವಾದ ಪರಿಕರಗಳನ್ನು ನೀಡುತ್ತಿವೆ. ಕೃಷಿಕರ ಅರ್ಥಿಕ ಸಬಲತೆಗೆ ಪ್ರೋತ್ಸಾಹವನ್ನು ನಿರಂತರ ನೀಡುತ್ತಾ ಬಂದಿದೆ. ಪಡೆದ ಸವಲತ್ತುಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ನಿಗಮದ ಜಿಲ್ಲಾ ವ್ಯವಸ್ಥಾಪಕ ಅಚ್ಚಪ್ಪ ಹಾಗೂ ಅಧಿಕಾರಿ ಆನಂದ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.