ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ವಿಕಾಸ ಯೋಜನೆಯಡಿ ರಬ್ಬರ್ ನೆಲಹಾಸು ವಿತರಣೆ

Published 23 ನವೆಂಬರ್ 2023, 14:52 IST
Last Updated 23 ನವೆಂಬರ್ 2023, 14:52 IST
ಅಕ್ಷರ ಗಾತ್ರ

ನರಸಿಂಹರಾಜಪುರ: ರಾಷ್ಟ್ರೀಯ ವಿಕಾಸ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ರಬ್ಬರ್ ನೆಲಹಾಸನ್ನು ಶಾಸಕ ಟಿ.ಡಿ.ರಾಜೇಗೌಡ ಮಂಗಳವಾರ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಗೌಡ, ‘ರಾಷ್ಟ್ರೀಯ ವಿಕಾಸ ಯೋಜನೆಯಡಿ ಪಶುಸಂಗೋಪನಾ ಇಲಾಖೆಯಿಂದ ತಾಲ್ಲೂಕಿನಲ್ಲಿ 20 ಹಾಗೂ ಖಾಂಡ್ಯ ಹೋಬಳಿ ವ್ಯಾಪ್ತಿಯಲ್ಲಿ 5ಜನ ಫಲಾನುಭವಿಗಳು ಒಟ್ಟು 25ಫಲಾನುಭವಿಗಳು ಆಯ್ಕೆಯಾಗಿದ್ದರೆ. ಒಂದು ರಬ್ಬರ್ ನೆಲಹಾಸಿಗೆ ₹2999 ಪಾವತಿಸಿದರೆ ಇನ್ನೊಂದು ರಬ್ಬರ್ ನೆಲಹಾಸು ಉಚಿತವಾಗಿ ನೀಡಲಾಗುತ್ತದೆ. ಇಂದು ಬಂದಿರುವ ಫಲಾನುಭವಿಗಳಿಗೆ ವಿತರಿಸಿ ಮುಂದಿನ ದಿನಗಳಲ್ಲಿ ಉಳಿದ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಸದಸ್ಯ ಸೈಯದ್ ವಸೀಂ, ಗ್ರಾಮ ಪಂಚಾಯಿತಿ ಸದಸ್ಯರಾದ ಬೀನು,ಸುನಿಲ್ ಕುಮಾರ್, ನರೇಂದ್ರ, ಮುಖಂಡರಾದ ಎಸ್.ಡಿ.ರಾಜೇಂದ್ರ, ಶ್ರೀಧರ್, ಎಚ್.ಎಂ.ಶಿವಣ್ಣ, ಪಶುವೈದ್ಯ ಡಾ.ಶಿವಕುಮಾರ್ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT