ಮಂಗಳವಾರ, ಜನವರಿ 28, 2020
28 °C

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ: ಅಲಂಕಾರಕ್ಕೆ ಜಿಲ್ಲಾಡಳಿತ ಅಡ್ಡಿ, ದೂಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ‘ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ತಳಿರುತೋರಣ ಕಟ್ಟಿ. ರಂಗೋಲಿ ಹಾಕಿ ಹಬ್ಬದ ವಾತಾವರಣ ನಿರ್ಮಾಣ ಮಾಡುವುದಕ್ಕೆ ಜಿಲ್ಲಾಡಳಿತ ಅಡ್ಡಿಪಡಿಸುತ್ತಿದೆ, ಪೊಲೀಸ್‌ ಇಲಾಖೆ ಬಳಸಿಕೊಂಡು ಸಮ್ಮೇಳನ ರದ್ದು ಮಾಡಲು ಒತ್ತಡ ಹೇರುತ್ತಿದ್ದಾರೆ’ ಎಂದು ಕೊಪ್ಪದ ರೈತ ಸಂಘದ ಮುಖಂಡ ನವೀನ ಕರುವಾನೆ ಹೇಳಿರುವ ವಿಡಿಯೋ ವೈರಲ್‌ ಆಗಿದೆ.

ತೋರಣಗಳನ್ನು, ಬ್ಯಾನರ್‌ಗಳನ್ನು ಬಿಚ್ಚುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬ್ಯಾನರ್‌: ಅನುಮತಿ ನಿರಾಕರಣೆ
ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗು ಸಂಭವದ ಹಿನ್ನೆಲೆಯಲ್ಲಿ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್ಸ್‌ ಕಟ್ಟಲು ಅನುಮತಿ ನೀಡಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿಗೆ ಶೃಂಗೇರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಿಖಿತವಾಗಿ ತಿಳಿಸಿದ್ದಾರೆ.

ನಿಯಮ ಉಲ್ಲಂಘಿಸಿದರೆ ಕ್ರಮ: ಎಸ್ಪಿ
ಸಮ್ಮೇಳನ ಮುಂದೂಡುವಂತೆ ಜಿಲ್ಲಾ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಿದ್ದೇವೆ. ನಿಯಮ ಉಲ್ಲಂಘಿಸಿದರೆ, ಗೊಂದಲಕ್ಕೆ ಎಡೆಮಾಡಿದರೆ ಕ್ರಮ ಜರುಗಿಸುತ್ತೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ ಪಾಂಡೆ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು