ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು | ಕುಡಿವ ನೀರಿನ ಸಮಸ್ಯೆ: ₹3.36 ಕೋಟಿ ಬಿಡುಗಡೆ

Published 4 ಮೇ 2024, 16:13 IST
Last Updated 4 ಮೇ 2024, 16:13 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಬರ‍ಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಹೊರಗುಳಿದಿದ್ದ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ₹3.36 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಜಿಲ್ಲೆಯ ಕಡೂರು, ತರೀಕೆರೆ, ಅಜ್ಜಂಪುರ, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಕಳಸ, ಶೃಂಗೇರಿ ತಾಲ್ಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲಾಗಿತ್ತು. ಬಯಲು ಸೀಮೆ ಮತ್ತು ಮಲೆನಾಡಿನ ಎಲ್ಲಾ ತಾಲ್ಲೂಕುಗಳು ಸೇರ್ಪಡೆಯಾಗಿದ್ದವು. ಆದರೆ, ಜಿಲ್ಲಾ ಕೇಂದ್ರವಾದ ಚಿಕ್ಕಮಗಳೂರು ತಾಲ್ಲೂಕು ಬರದ ಪಟ್ಟಿಯಿಂದ ಹೊರಗುಳಿದಿತ್ತು.

ಆದರೆ, ಚಿಕ್ಕಮಗಳೂರು ತಾಲ್ಲೂಕಿನ ಬಯಲು ಭಾಗದ ಹಳ್ಳಿಗಳಲ್ಲಿ ಬರದ ಸ್ಥಿತಿ ಇತ್ತು. ಕುಡಿಯುವ ನೀರಿನ ಸಮಸ್ಯೆ ಕೂಡ ಎದುರಾಗಿತ್ತು. ಟ್ಯಾಂಕರ್ ಮೂಲಕ ನೀರು ಪೂರೈಸಬೇಕಾದ ಸ್ಥಿತಿ ಇತ್ತು. 

ಚಿಕ್ಕಮಗಳೂರ ತಾಲ್ಲೂಕಿನ ತಿಮ್ಮನಹಳ್ಳಿ, ಕದ್ರಿಮಿದ್ರಿ, ಇಂದಿರಾನಗರ, ಹೊಸಪೇಟೆ, ಕೂದುವಳ್ಳಿ, ಅಜ್ಜಂಪುರ ತಾಲ್ಲೂಕಿನ ಚೀರನಹಳ್ಳಿ, ಹರಳಹಳ್ಳಿ, ನಾಗೇನಹಳ್ಳಿ, ತಿಮ್ಮಾಪುರ, ಕಾರೇಹಳ್ಳಿ, ತರೀಕೆರೆ ತಾಲ್ಲೂಕಿನ ಬೆಟ್ಟದಹಳ್ಳಿ, ಬೇಲೇನಹಳ್ಳಿ ತಾಂಡ್ಯ ಸೇರಿದಂತೆ 38 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. 28 ಖಾಸಗಿ ಕೊಳವೆ ಬಾವಿಗಳನ್ನು ಪಡೆದು ಸಾರ್ವಜನಿಕರಿಗೆ ನೀರು ಪೂರೈಕೆ ಮಾಡಲಾಗುತ್ತಿದೆ.

ಜಿಲ್ಲೆಯ 36 ಗ್ರಾಮ ಪಂಚಾಯಿತಿ ಹಾಗೂ 66 ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. 407 ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗಬಹುದು ಎಂದು ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಗುರುತು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT