ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳ್ಳಿಗಳಿಗೆ 108 ಆಂಬುಲೆನ್ಸ್ ಸೇವೆ: ಡಾ.ಕೆ.ಸುಧಾಕರ್

ಶೃಂಗೇರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭೇಟಿ
Last Updated 8 ನವೆಂಬರ್ 2020, 4:59 IST
ಅಕ್ಷರ ಗಾತ್ರ

ಶೃಂಗೇರಿ: ಶೃಂಗೇರಿ ಶಾರದಾ ಮಠಕ್ಕೆ ಶನಿವಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿದರು. ಶಾರದಾಂಬ ದೇವಾಲಯ, ಶಕ್ತಿ ಗಣಪತಿ ಹಾಗೂ ತೋರಣ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ನರಸಿಂಹವನದ ಗುರುನಿವಾಸ ದಲ್ಲಿ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದುಕೊಂಡರು.

‘ಶೃಂಗೇರಿ ಸರ್ಕಾರಿ ಆಸ್ಪತ್ರೆಯ ಮೇಲ್ದರ್ಜೆಗಾಗಿ ತಹಶೀಲ್ದಾರ್ ಗುರುತಿಸಿದ ಜಾಗವು ಸೆಕ್ಷನ್ 4(1)ನಲ್ಲಿದ್ದು ಅದರ ಕುರಿತು ವಿಶೇಷ ಗಮನ ನೀಡಿ, ಮಾನವೀಯ ದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಯನ್ನು 100 ಬೆಡ್‍ಗೆ ಏರಿಸಬೇಕು. ಆಸ್ಪತ್ರೆಯಲ್ಲಿ ಮೂಳೆ, ಇ.ಎನ್.ಟಿ ಹಾಗೂ ಅರಿವಳಿಕೆ ತಜ್ಞರ ಹುದ್ದೆ ಖಾಲಿಯಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಅವಶ್ಯವಿರುವ ವೈದ್ಯಕೀಯ ಸೌಲಭ್ಯ ನೀಡುವ ನಿಟ್ಟಿನಲ್ಲಿ ತಾವು ಪ್ರಯತ್ನಿಸಬೇಕು’ ಎಂದು ತಾಲ್ಲೂಕು ಬಿಜೆಪಿ ಯುವಾ ಮೋರ್ಚಾದ ಪದಾಧಿ ಕಾರಿಗಳಾದ ಶ್ರೇಯಸ್ಸ್, ಸಚಿನ್, ವಿಘ್ನೇಶ್, ಸೂರಜ್ ಅನಿರುದ್ಧ್, ಕಾರ್ತಿಕ್, ರಚಿತ್, ಕುಮಾರಸ್ವಾಮಿ ಅವರು ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಡಾ.ಸುಧಾಕರ್‌ ಪತ್ರಕರ್ತ ರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಕಡಿಮೆಯಾಗಿದೆ. 108 ಆಂಬುಲೆನ್ಸ್ ಸೇವೆ ಇನ್ನಷ್ಟು ಗ್ರಾಮೀಣ ಪ್ರದೇಶದ ಜನರನ್ನು ತಲುಪಬೇಕು. ಈ ನಿಟ್ಟಿನಲ್ಲಿ ಹೊಸ ರೂಪುರೇಷೆಗಳನ್ನು ಮಾಡಿ, ಅತಿ ಶೀಘ್ರದಲ್ಲಿ ಚಾಲನೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುವ ನೌಕರರ ಸೇವಾ ಭದ್ರತೆ ನೀಡಿ ಕಾಯಂ ಗೊಳಿಸಬೇಕಾಗಿದ್ದು, ಈ ಕುರಿತು ವಿಧಾನಸಭೆಯಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.

‘ಶೃಂಗೇರಿ ಕ್ಷೇತ್ರಕ್ಕೆ ಜಗತ್ತಿನಲ್ಲಿ ಬಲುದೊಡ್ಡ ಸ್ಥಾನವಿದೆ. ತಾಲ್ಲೂಕಿನ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಏರಿಸು ತ್ತೇವೆ. ಈ ಕುರಿತು ಹೆಚ್ಚಿನ ಆಸಕ್ತಿ ವಹಿಸಲಾಗುವುದು. ಸರ್ಕಾರಿ ಅಸ್ಪತ್ರೆ ಗಳಲ್ಲಿ ವೈದ್ಯರ ಕೊರತೆ ಇದೆ. ಇದರ ಕುರಿತು ಮುಂಬರುವ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

ಮಠದ ಆಡಳಿತಾಧಿಕಾರಿ ಡಾ.ವಿ.ಆರ್.ಗೌರೀಶಂಕರ್, ಮಾಜಿ ಶಾಸಕ ಡಿ.ಎನ್.ಜೀವರಾಜ್, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ತಲಗಾರು ಉಮೇಶ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಶಿವಶಂಕರ್, ಶಿಲ್ಪಾರವಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜಯಶೀಲಾ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಎಂ.ಎಲ್.ಪ್ರಕಾಶ್, ಡಿ.ಎಚ್.ಒ ಡಾ.ಉಮೇಶ್, ತಹಶೀಲ್ದಾರ್ ಅಂಬುಜಾ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT