ಮೂಡಬಾಗಿಲು (ಎನ್.ಆರ್.ಪುರ): ತಾಲ್ಲೂಕಿನ ಬಾಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ರತ್ನಮ್ಮ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಣ್ಣಗೌಡ ಶುಕ್ರವಾರ ಆಯ್ಕೆಯಾದರು.
ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಪಂಚಾಯಿತಿ ಎಂಜಿನಿಯರ್ ವೀರಪ್ಪ ಕಾರ್ಯನಿರ್ವಹಿಸಿದರು.
25 ವರ್ಷಗಳ ನಂತರ ಕಾಂಗ್ರೆಸ್ ಬೆಂಬಲಿತ ಸದಸ್ಯರೊಬ್ಬರು ಬಾಳೆ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತೋಷ ಆಗಿದೆ ಎಂದು ಕಾಂಗ್ರೆಸ್ ಮುಖಂಡರು ಸಂಭ್ರಮಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ.ಅಂಶುಮಂತ್, ತಾಲ್ಲೂಕು ಘಟಕದ ಅಧ್ಯಕ್ಷ ಗೇರ್ ಬೈಲ್ ನಟರಾಜ್, ಕಸಬಾ ಹೋಬಳಿ ಅಧ್ಯಕ್ಷ ಸಾಜು, ಬಾಳೆ ಪಂಚಾಯಿತಿ ಕಾಂಗ್ರೆಸ್ ಅಧ್ಯಕ್ಷ ಡಿ.ಜಿ.ಮಂಜಪ್ಪ ಗೌಡ, ಮುಖಂಡರಾದ ಸುಂದರೇಶ್, ಮನು, ಬೆನ್ನಿ, ಎಸ್.ಡಿ.ರಾಜೇಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.