ಭಾನುವಾರ, ಆಗಸ್ಟ್ 14, 2022
19 °C

ಮತದಾನ ಬಹಿಷ್ಕಾರದ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಖಾಂಡ್ಯ ಹೋಬಳಿಯಲ್ಲಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವ ಕುರಿತ ಬ್ಯಾನರ್‌ಗಳನ್ನು ಹಾಕಲಾಗಿದೆ.

ಕಸ್ತೂರಿ ರಂಗನ್ ವರದಿ, ಪರಿಸರ ಸೂಕ್ಷ್ಮ ವಲಯ, ಹುಲಿ ಯೋಜನೆ ವಿರೋಧಿಸಿ ಖಾಂಡ್ಯ ಹೋಬಳಿ ನಾಗರಿಕ ರಕ್ಷಣಾ ವೇದಿಕೆ, ಸರ್ವಪಕ್ಷ ಹಾಗೂ ಸಮಸ್ತರ ವತಿಯಿಂದ ಹೋಬಳಿಯ 22 ಬೂತ್‌ಗಳಲ್ಲಿ ಚುನಾವಣಾ ಬಹಿಷ್ಕಾರ ಕರೆ ನೀಡುವ ಬ್ಯಾನರ್ ಅಳವಡಿಸಲಾಗಿದೆ.

ಬಹಿಷ್ಕಾರದ ಕುರಿತು ಮುಂದಿನ ಒಂದೆರಡು ದಿನಗಳಲ್ಲಿ ಅಧಿಕಾರಿಗಳಿಗೆ ಅಧಿಕೃತವಾಗಿ ಮನವಿ ನೀಡಲಾಗುತ್ತದೆ ಎಂದು ಸಂಘಟನೆಯ ಸದಸ್ಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.